Download Our App

Follow us

Home » ರಾಜ್ಯ » ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಆರೋಪ – ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್..!

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಆರೋಪ – ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್..!

ಕಲಬುರಗಿ : ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ಸಿಕ್ಕಿದೆ. ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ದ ಅವಮಾನಕರ ಪದ ಬಳಕೆ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ದ ದಾಖಲಾಗಿದ್ದ ಎಫ್ಐಆರ್ ಗೆ ಕರ್ನಾಟಕ ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠವು ತಡೆಯಾಜ್ಞೆ ನೀಡಿದೆ.

ಕಲಬುರಗಿ ಹೈ ಕೋರ್ಟ್ ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಪೀಠದಿಂದ ಆದೇಶ ಹೊರಡಿಸಿದ್ದು, ಚಕ್ರವರ್ತಿ ಸುಲಿಬೆಲೆ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಕೀಲ ಅರುಣ್ ಶ್ಯಾಮ್ ಅವರ ವಾದವನ್ನು ಆಲಿಸಿದ ಕೋರ್ಟ್ “ಅಯೋಗ್ಯ ಎನ್ನುವ ಹೇಳಿಕೆ ಯಾವ ಜಾತಿಗೂ ಬರೋದಿಲ್ಲ. ಯಾರ ಜಾತಿ ನಿಂದನೆ ಆಗಿದೆ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ. ನೀವು ಯಾವ ಉದ್ದೇಶ ಇಟ್ಟುಕೊಂಡು ದೂರು ನೀಡಿದ್ದಿರಿ ಅನ್ನೋದು ಗೋತ್ತಾಗುತ್ತೆ” ಎಂದು ದೂರುದಾರರನ್ನೇ ತರಾಟೆಗೆ ತೆಗೆದುಕೊಂಡಿದೆ. ಬಳಿಕ FIRಗೆ ತಡೆಯಾಜ್ಞೆ ನೀಡಿದೆ.

‘ಅಯೋಗ್ಯ’ ಎಂದು ಸೂಲಿಬೆಲೆ ಪೋಸ್ಟ್‌
ಪ್ರಕರಣಕ್ಕೆ ತಡೆಯಾಜ್ಞೆ ನೀಡಿದ ಬೆನ್ನಲ್ಲೇ ಚಕ್ರವರ್ತಿ ಸೂಲಿಬೆಲೆ ಅವರು, ‘ಅಯೋಗ್ಯ’ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.

ಏನು ಹೇಳಿದ್ದರು ಚಕ್ರವರ್ತಿ ಸೂಲಿಬೆಲೆ? ಇತ್ತೀಚೆಗೆ ರಾಯಚೂರಿನ ಶಿರವಾದಲ್ಲಿ ನಮೋ ಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ, ಕಲಬುರಗಿಯ ಇಎಸ್​ಐ ಆಸ್ಪತ್ರೆಯ ಬಗ್ಗೆ ಮಾತನಾಡಿದ್ದರು. ಇದೇ ವೇಳೆ, ಆಸ್ಪತ್ರೆಯನ್ನು ತಮ್ಮ ಹೆಸರಿನ ಪ್ರಚಾರಕ್ಕೆ ಖರ್ಗೆ ಅವರು ಬಳಸಿದ್ದಾರೆ. ಜನರ ತೆರಿಗೆ ಹಣದಲ್ಲಿ ಅವರು ತಮ್ಮ ಹೆಸರನ್ನು ಶಾಶ್ವತಗೊಳಿಸಲು ಮುಂದಾದ ಅಯೋಗ್ಯರಾಗಿದ್ದಾರೆ ಎಂದು ಹೇಳಿದ್ದರು.

ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದ್ದಾರ್ ನೇತೃತ್ವದಲ್ಲಿ ಸೂಲಿಬೆಲೆ ವಿರುದ್ಧ ಕಮಿಷನರ್​ಗೆ ದೂರು ನೀಡಲಾಗಿತ್ತು. ಸೂಲಿಬೆಲೆ ಅವರು ಖರ್ಗೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದರು. ಇಷ್ಟೇ ಅಲ್ಲದೆ, ಚಕ್ರವರ್ತಿ ಸೂಲಿಬೆಲೆ ಅವರನ್ನು ಸಮಾಜದ ಕೊಳಕು ಕ್ರಿಮಿ ಎಂದೂ ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮಗಳಲ್ಲಿ ನಿಂದಿಸಿತ್ತು.

ಇದನ್ನೂ ಓದಿ : ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹ*ತ್ಯೆ ಕೇಸ್ – 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here