ಬಿಗ್ ಬಾಸ್ ಕನ್ನಡ 11ನೇ ಆವೃತ್ತಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಿಚ್ಚ ಸುದೀಪ್ ಸತತ 11ನೇ ಆವೃತ್ತಿಯಲ್ಲಿ ನಿರೂಪಣೆಯ ಹೊಣೆ ಹೊತ್ತು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಈ ವಾರ 9.9 ಟಿವಿಆರ್ ಪಡೆಯುವ ಮೂಲಕ ದಾಖಲೆ ಬರೆದಿದೆ. ಆದರೆ ಇದೆಲ್ಲದರ ನಡುವೆ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲಿ ಇನ್ನು ಮುಂದೆ ನಾನು ಇರುವುದಿಲ್ಲ ಎಂದು ಹೇಳಿದ್ದಾರೆ.
ಹೌದು, ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಇದೇ ನನ್ನ ಕೊನೆ ಆವೃತ್ತಿ ಆಗಲಿದ್ದು, ಮುಂದಿನ ಸೀಸನ್‌ನಲ್ಲಿ ನಾನು ನಿರೂಪಕನಾಗಿರುವುದಿಲ್ಲ ಎಂದು ಹೇಳಿದ್ದಾರೆ. ಕಾರಣ ಏನೆಂದು ಬಹಿರಂಗಪಡಿಸದೇ ಇದ್ದರೂ, ಇದು ಬಿಗ್ ಬಾಸ್ ಕನ್ನಡ ಕಾರ್ಯಕ್ರಮ ನಿರೂಪಕನಾಗಿ ಕೊನೆಯ ಸೀಸನ್ ಎನ್ನುವುದನ್ನು ಮಾತ್ರ ಖಚಿತಪಡಿಸಿದ್ದಾರೆ.
ಕಿಚ್ಚ ಸುದೀಪ್ ಅವರು ನಿನ್ನೆ ರಾತ್ರಿ ತೆಗೆದುಕೊಂಡ ಈ ತೀರ್ಮಾನ ಅತಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಎಲ್ಲರೂ ಸುದೀಪ್ ಅವರ ನಿರ್ಧಾರಕ್ಕೆ ಅಚ್ಚರಿಗೊಂಡಿದ್ದಾರೆ. ಕೆಲವರು ಸುದೀಪ್ ಅವರು ತಮ್ಮ ನಿರ್ಧಾರವನ್ನು ಹಿಂಪಡೆಯಬೇಕು ಅಂತ ಮನವಿಯನ್ನು ಮಾಡುತ್ತಿದ್ದಾರೆ. ಆದರೆ ಸುದೀಪ್ ಅವರು ತಾವು ಇಟ್ಟ ಹೆಜ್ಜೆಯಿಂದ ಹಿಂದೆ ಸರಿಯುವುದು ಅನುಮಾನವಾಗಿದೆ. ಇದಕ್ಕೆ ಸುದೀಪ್ ಅವರ ಮಗಳು ಸಾನ್ವಿ ಸುದೀಪ್ ಅವರು ಮಾಡಿರೋ ಈ ಪೋಸ್ಟ್ ಸಾಕ್ಷಿಯಾಗಿದೆ.
ಬಿಗ್ ಬಾಸ್ ನಿರೂಪಣೆಗೆ ವಿದಾಯ ಹೇಳಿದ ಕಿಚ್ಚ ಸುದೀಪ್ ಅವರ ನಿರ್ಧಾರಕ್ಕೆ ಮಗಳು ಸಾನ್ವಿ ಸುದೀಪ್ ಅವರು ಪ್ರತಿಕ್ರಿಯಿಸಿದ್ದಾರೆ. “ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು. ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನೀವು ಅಮೋಘವಾಗಿ ಕಾಣಿಸಿಕೊಳ್ಳುವುದನ್ನ ತಪ್ಪಿಸಿಕೊಳ್ಳುತ್ತೀರಿ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು ನನಗೆ ಅತ್ಯಂತ ಸಂತೋಷವನ್ನು ತಂದಿದೆ. ಬಿಗ್ ಬಾಸ್ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವು ನೀಡಿರುವ ಕೊಡುಗೆಗೆ ನಾನು ಹೆಮ್ಮೆ ಪಡುತ್ತೇನೆ ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!