ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋನಲ್ಲಿ ಬಿಗ್ ಬಾಸ್ ಕೂಡ ಒಂದು. ಸೀಸನ್ 1ರಿಂದ 10ರವರೆಗೂ ವೀಕ್ಷಕರನ್ನು ಒಂದಲ್ಲ ಒಂದು ರೀತಿಯಲ್ಲಿ ಮನರಂಜಿಸುತ್ತಲೆ ಬರುತ್ತಿದೆ. ಇದರ ನಡುವೆ ಓಟಿಟಿ ಸೀಸನ್ 1 ಕೂಡ ನಡೆಯಿತ್ತು. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಇದರ ನಡುವೆ ಕಳೆದ 10 ವರ್ಷಗಳಿಂದ ಕನ್ನಡದ ಬಿಗ್ ಬಾಸ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಕಿಚ್ಚ ಸುದೀಪ್ ಈ ಸೀಸನ್ನಲ್ಲಿ ಹೋಸ್ಟ್ ಆಗಿ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದೆ.
ಹೌದು, ಬಿಗ್ ಬಾಸ್ ಕನ್ನಡ ಸೀಸನ್ -11 ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ ಕೊನೆಯ ಅಥವಾ ಮೊದಲ ವಾರದಲ್ಲಿ ಹೊಸ ಸೀಸನ್ ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಈ ನಡುವೆ ದೊಡ್ಮನೆಗೆ ಎಂಟ್ರಿ ಆಗುವ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯೂ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ನಡುವೆ ಬಿಗ್ ಬಾಸ್ ನಿರೂಪಕರ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಸನ್ 11ರಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.
ಕಿಚ್ಚ ಸುದೀಪ್ ಅವರ ಬಿಗ್ ಬಾಸ್ ನಿರೂಪಣೆಗೆ ಫಿದಾ ಆಗದವರಿಲ್ಲ. ಮನೆಯಲ್ಲಿನ ಸ್ಪರ್ಧಿಗಳು ತಪ್ಪು ಮಾಡಿದರೆ ಅವರಿಗೆ ನ್ಯಾಯ, ನೀತಿಯ ಪಾಠವನ್ನು ಕಿಚ್ಚ ಮಾಡುತ್ತಿದ್ದರು. ಈ ಬಾರಿ ಅವರ ಬದಲಿಗೆ ಈಗಾಗಲೇ ಕಿರುತೆರೆ ಹೋಸ್ಟ್ ಆಗಿ ಕಾಣಿಸಿಕೊಂಡಿರುವ ನಟ ರಮೇಶ್ ಅರವಿಂದ್ ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ. ಇದಲ್ಲದೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಬಿಗ್ ಬಾಸ್ ಹೋಸ್ಟ್ ಮಾಡುವ ಸಾಧ್ಯತೆಯಿದೆ ಎನ್ನುವ ಮಾತುಗಳು ಹರಿದಾಡುತ್ತಿದೆ.
ಈಗಾಗಲೇ ಕೋಟ್ಯಾಧಿಪತಿ ಮತ್ತು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರದಲ್ಲಿ ರಮೇಶ್ ಅರವಿಂದ್ ಅವರನ್ನು ನೋಡುತ್ತಿದ್ದವರಿಗೆ ‘ಮಹಾನಟಿ’ ಕಾರ್ಯಕ್ರಮದ ಮೂಲಕ ಇನ್ನು ಹತ್ತಿರವಾಗಿದ್ದಾರೆ. ಹೀಗಾಗಿ ರಮೇಶ್ ಅರವಿಂದ್ ಬಂದರೂ ಬರಹುದು. ಇನ್ನು ಕಾಂತಾರ ಸೀಕ್ವೆಲ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಡಿವೈನ್ ಸ್ಟಾರ್ ಸದ್ಯ ಬಹುಬೇಡಿಕೆಯ ನಟ ಕಮ್ ನಿರ್ದೇಶಕ ಹೀಗಾಗಿ ಡಿವೈನ್ ಸ್ಟಾರ್ ಕೂಡ ಮಾಡಬಹುದು ಎನ್ನಲಾಗಿದೆ. ಆದರೆ ಈ ಬಾರಿ ಸೀಸನ್ -11 ಯಾರು ನಡೆಸಿಕೊಡಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.