Download Our App

Follow us

Home » ಅಪರಾಧ » ಕಿಡ್ನಾಪ್​ ಕೇಸ್ : ಭವಾನಿ ರೇವಣ್ಣಗೆ ಬಿಗ್​ ರಿಲೀಫ್ ​​​- ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್..!

ಕಿಡ್ನಾಪ್​ ಕೇಸ್ : ಭವಾನಿ ರೇವಣ್ಣಗೆ ಬಿಗ್​ ರಿಲೀಫ್ ​​​- ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್..!

ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆನ್ನಲಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ಕೆ.ಆರ್ ನಗರದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದ್ದು, ಒಟ್ಟಾರೆ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತ ಮಹಿಳೆಗೆ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಸ್ವಃ ಸಂತ್ರಸ್ತ ಮಹಿಳೆಯೇ ಭವಾನಿ ಅಕ್ಕ ಬಟ್ಟೆ, ಊಟ ಕಳುಹಿಸಿದ್ದರೆಂದು ಹೇಳಿಕೆ ನೀಡಿದ್ದಾರೆ.

ಈ ಎಲ್ಲ ಅಂಶಗಳನ್ನು ಪರಿಗಣಿಸಿ ಹೈಕೋರ್ಟ್‌ ಪೀಠದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಅವರು ನಿರೀಕ್ಷಣಾ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.  ಇನ್ನು ಕೋರ್ಟ್ ಈ ಹಿಂದೆ ವಿಧಿಸಿದ್ದ ಕಂಡೀಷನ್ ಮುಂದುವರೆಸಿ ಮೈಸೂರು, ಹಾಸನಕ್ಕೆ ಭೇಟಿ ನೀಡದಂತೆ ಭವಾನಿಗೆ ನಿರ್ಬಂಧ ವಿಧಿಸಿದೆ.

ಇದನ್ನೂ ಓದಿ : ಇಂದು A2 ಆರೋಪಿ ದರ್ಶನ್​​ರನ್ನು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು..!

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here