ಬೆಂಗಳೂರು : ಕೆ ಆರ್ ನಗರ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಕಡೆಗೂ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಕಳೆದ ಮೇ 09ರಂದು ವಾದ, ಪ್ರತಿವಾದ ಆಲಿಸಿದ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೀತು.
ಇದೀಗ ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಧೀಶ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ 5 ಲಕ್ಷ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, SIT ತನಿಖೆಗೆ ಸಹಕರಿಸಬೇಕು ಎಂದು ಷರತ್ತುಬದ್ಧ ವಿಧಿಸಿ ಜಾಮೀನು ಮಂಜೂರು ಮಾಡಿತು.
ಇದನ್ನೂ ಓದಿ : ‘ಇದು ನಮ್ ಶಾಲೆ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್ ಮಾಡಿದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್..!
Post Views: 122