ಧಾರವಾಡ : ಶನಿವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಧಾರವಾಡದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಂದಗೋಳದ ಬೆಳ್ಳಿಗಟ್ಟಿ ಬಳಿ ಘಟನೆ ಸಂಭವಿಸಿದೆ. ಅಪಘಾತವಾಗಿದ್ದ ಕಾರುಗಳ ಪಕ್ಕ ನಿಂತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಮೊದಲು ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿತ್ತು, ಕಾರಿನಲ್ಲಿದ್ದ 7 ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದವು. ಆಂಬ್ಯುಲೆನ್ಸ್ನಲ್ಲಿ ಸಾಗಿಸಲು ರಸ್ತೆ ಪಕ್ಕ ನಿಂತಿದ್ದರು, ಇದೇ ವೇಳೆಗೆ ಹಾವೇರಿ ಕಡೆಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಕಾರು ಪಕ್ಕ ನಿಂತಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಎರಡು ಕಾರು ಬೆಂಗಳೂರಿನಿಂದ ಶಿರಡಿ, ಗೋವಾಗೆ ಹೋಗುತ್ತಿತ್ತು.
ಸ್ಥಳಕ್ಕೆ ಧಾರವಾಡ ಜಿಲ್ಲಾ ಎಸ್ಪಿ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹಗಳ ರವಾನೆ ಮಾಡಲಾಗಿದೆ.
ಇದನ್ನೂ ಓದಿ : ರಾಜ್ಯಕ್ಕೆ BJP ಚುನಾವಣಾತಂತ್ರಗಾರಿಕೆ ಟೀಂ ಎಂಟ್ರಿ..