Download Our App

Follow us

Home » ಸಿನಿಮಾ » ಕಿರಣ್ ರಾಜ್ ನಟನೆಯ ‘ಭರ್ಜರಿ ಗಂಡು’ ಚಿತ್ರದ ಮತ್ತೊಂದು ಹಾಡು ರಿಲೀಸ್..!

ಕಿರಣ್ ರಾಜ್ ನಟನೆಯ ‘ಭರ್ಜರಿ ಗಂಡು’ ಚಿತ್ರದ ಮತ್ತೊಂದು ಹಾಡು ರಿಲೀಸ್..!

ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ “ಭರ್ಜರಿ ಗಂಡು”. ಪ್ರಸಿದ್ಧ್ ನಿರ್ದೇಶನದ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ” ಹುಯ್ಯೋ ಹುಯ್ಯೋ ಮಳೆರಾಯ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ಗಾಯಕ ರಘು ದೀಕ್ಷಿತ್ ಈ ಹಾಡನ್ನು ಹಾಡಿದ್ದಾರೆ. ಗುಮ್ಮಿನೇನಿ ವಿಜಯ್ ಸಂಗೀತ ನೀಡಿರುವ ಈ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಎಲ್ಲಾ ಕಡೆ ಬಿಸಿಲು ಹೆಚ್ಚಾಗಿದ್ದು‌, ನೀರಿನ ಬವಣೆ ಹೆಚ್ಚಿದೆ. ಈ ಸಂದರ್ಭದಲ್ಲಿ ಉತ್ತಮ ಮಳೆಯಾಗಿ ನೀರಿನ ಬವಣೆ ದೂರವಾಗಲಿ ಎಂದು ಚಿತ್ರದ ನಾಯಕ ಕಿರಣ್ ರಾಜ್ ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವರ ಬಳಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ಚಿತ್ರಮಂದಿರಗಳಿಗೆ ಬರಲಿದ್ದಾನೆ.
ಪ್ರಸಿದ್ದ್ ಸಿನಿಮಾಸ್, ಮದನ್ ಗೌಡ ಹಾಗೂ ಅನಿಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಗುಮ್ಮಿನೇನಿ‌ ವಿಜಯ್ ಸಂಗೀತ ಸಂಯೋಜನೆ, ಕಿಟ್ಟಿ ಕೌಶಿಕ್ ಛಾಯಾಗ್ರಹಣ ಹಾಗೂ ವೆಂಕಿ ಯುಡಿವಿ ಸಂಕಲನವಿರುವ ಈ‌ ಚಿತ್ರಕ್ಕೆ ಮಳವಳ್ಳಿ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ.

ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಯಶಾ ಶಿವಕುಮಾರ್ ಇದ್ದಾರೆ. ರಮೇಶ್ ಭಟ್ , ರಾಕೇಶ್ ರಾಜ್, ಸುರೇಖ, ವೀಣಾ ಸುಂದರ್, ಜಯಶ್ರೀ, ನಾಗೇಶ್ ರೋಹಿತ್ ನಾಗೇಶ್, ಸೌರಭ್ ಕುಲಕರ್ಣಿ, ಮಡೆನೂರು ಮನು, ಗೋವಿಂದೇ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಮಗು ಅಕ್ರಮ ದತ್ತು ಪಡೆದ ಪ್ರಕರಣ : ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಸವಾರ ದುರ್ಮರಣ..!

ಬೆಂಗಳೂರು : ನಗರದಲ್ಲಿ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಸವಾರ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್ 32 ವರ್ಷ ಅಪಘಾತದಲ್ಲಿ

Live Cricket

Add Your Heading Text Here