Download Our App

Follow us

Home » ಸಿನಿಮಾ » ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ನೀಡಿದ ‘ರಾನಿ’ ಚಿತ್ರತಂಡ – ಆ.30ಕ್ಕೆ ಸಿನಿಮಾ ತೆರೆಗೆ..!

ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ನೀಡಿದ ‘ರಾನಿ’ ಚಿತ್ರತಂಡ – ಆ.30ಕ್ಕೆ ಸಿನಿಮಾ ತೆರೆಗೆ..!

ಕನ್ನಡತಿ ಧಾರಾವಾಹಿ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಗೆದ್ದಿರುವ ಹಾಗೂ ಹಿರಿತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರತಂಡ ಹಾಡೊಂದನ್ನು ಉಡುಗೊರೆ ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಪ್ರಮೋದ್ ಮರವಂತೆ ಅವರು ಬರೆದು, ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿರುವ ‘ಹವಮಾನವೆ ಸುಂದರ ಸುಂದರ’ ಎಂಬ ಹಾಡು ಟಿ-ಸೀರೀಸ್‍ನ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

ಹುಟ್ಟುಹಬ್ಬ ಹಾಗೂ ಹಾಡು ಬಿಡುಗಡೆ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಕಿರಣ್‍ ರಾಜ್‍, ‘ಒಂದು ಹಂತದಲ್ಲಿ ನನಗೆ ಜೀವನದಲ್ಲಿ ಮುಂದೇನು ಎಂಬ ಪ್ರಶ್ನೆ ಎದುರಾಯಿತು. ಆಗ ನನಗೆ, “ರಾನಿ” ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರು ಸಿಕ್ಕರು. ನನಗೂ ಈ ಚಿತ್ರದ ಕಥೆ ಇಷ್ಟವಾಯಿತು. ಚಿತ್ರದ ಕಥೆ ಕಾಲ್ಪನಿಕವಾದರೂ, ಪ್ರತಿಯೊಬ್ಬರಿಗೂ ನನ್ನ ಪಾತ್ರ ಹತ್ತಿರವಾಗುತ್ತದೆ‌. ಹೆವಿ ಬಜೆಟ್​​​ನ ಚಿತ್ರವಿದು. ಕೆಲವರು ನನ್ನ ಸಿನಿಮಾಗೆ ಯಾಕೆ ಇಷ್ಟೊಂದು ಖರ್ಚು ಮಾಡುತ್ತಿದ್ದೀರಾ? ಎಂದು ನಿರ್ಮಾಪಕರನ್ನು ಕೇಳಿರಬಹುದು. ಆದರೆ ನಮ್ಮ ನಿರ್ಮಾಪಕರು ವ್ಯಕ್ತಿಗಿಂತ ವ್ಯಕ್ತಿತ್ವಕ್ಕೆ ಬೆಲೆ ಕೊಡುವವರು. ಹಾಗಾಗಿ, ಹಣಕಾಸಿನ ವಿಚಾರಕ್ಕಿಂತ ಒಳ್ಳೆಯ ಸಿನಿಮಾ ಮಾಡಿದ್ದಾರೆ’ ಎಂದಿದ್ದಾರೆ.

‘ಇದು ಆ್ಯಕ್ಷನ್‍ ಚಿತ್ರವಾದರೂ, ಪಕ್ಕಾ ಕೌಟುಂಬಿಕ ಚಿತ್ರ. ಈ ಹಿಂದೆ ನೀವು ನೋಡಿರದ ಕಿರಣ್ ರಾಜ್ ಅವರನ್ನು “ರಾನಿ” ಚಿತ್ರದಲ್ಲಿ ನೋಡಬಹುದು‌. ಆರು ಆಕ್ಷನ್ ಸನ್ನಿವೇಶಗಳಿದೆ. ಸೆಂಟಿಮೆಂಟ್‍ ಸಹ ಸ್ವಲ್ಪ ಹೆಚ್ಚಾಗಿಯೇ ಇದೆ. ಆರು ಫೈಟ್‍ಗಳಿಗೂ ವಿನೋದ್‍ ಮಾಸ್ಟರ್ ಅವರೆ ಸಾಹಸ ನಿರ್ದೇಶನ ಮಾಡಿದ್ದಾರೆ. ಆರಂಭದಿಂದಲೂ ಸದ್ದು ಮಾಡುತ್ತಿರುವ “ರಾನಿ” ಆಗಸ್ಟ್ 30ಕ್ಕೆ ತೆರೆಗೆ ಬರಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದರು.

ಚಿತ್ರತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಬಂದಿದೆ. ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ನಿರ್ಮಾಪಕರಾದ ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗ್ಡೆ ತಿಳಿಸಿದ್ದಾರೆ.

“ಹವಮಾನ” ಹಾಡು ಹುಟ್ಟಿದ ಬಗ್ಗೆ ಪ್ರಮೋದ್ ಮರವಂತೆ ಹೇಳಿದರು‌. ಸಂಗೀತದ ಕುರಿತು ಮಣಿಕಂತ್ ಕದ್ರಿ ವಿವರಿಸಿದರು. ನಟಿಯರಾದ ಸಮೀಕ್ಷಾ, ರಾಧ್ಯ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸ್ಥಿರ ಛಾಯಾಗ್ರಾಹಕರಾಗಿದ್ದ ರಾಘವೇಂದ್ರ ಬಿ ಕೋಲಾರ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ.

ಇದನ್ನೂ ಓದಿ : ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್ – ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್..!

Leave a Comment

DG Ad

RELATED LATEST NEWS

Top Headlines

‘ಜಾಲಿವುಡ್‌’ಗೆ ಒಂದು ವರ್ಷದ ಸಂಭ್ರಮ.. ತಂಡದಲ್ಲಿ ಮನೆ ಮಾಡಿದ ಹರುಷ..!

ಡಾ. ಐಸಿರಿ ಕೆ ಗಣೇಶ್ ಅವರ ಸಾರಥ್ಯದ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಯಶಸ್ವಿಯಾಗಿ ಒಂದು ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿಟ್ಟಿದೆ‌. ಈ ಹಿನ್ನೆಲೆಯಲ್ಲಿ ಜಾಲಿವುಡ್​​​

Live Cricket

Add Your Heading Text Here