Download Our App

Follow us

Home » ಸಿನಿಮಾ » ‘ರೂಪಾಂತರ’ ಚಿತ್ರದಲ್ಲಿ ರಾಜ್​​ ಬಿ ಶೆಟ್ಟಿ : ಸಿನಿ ರಸಿಕರ ಮನಗೆದ್ದ ‘ಕಿತ್ತಾಳೆ’ ಸಾಂಗ್..!

‘ರೂಪಾಂತರ’ ಚಿತ್ರದಲ್ಲಿ ರಾಜ್​​ ಬಿ ಶೆಟ್ಟಿ : ಸಿನಿ ರಸಿಕರ ಮನಗೆದ್ದ ‘ಕಿತ್ತಾಳೆ’ ಸಾಂಗ್..!

ಒಂದು ಮೊಟ್ಟೆಯ ಕಥೆಯ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಜನರ ಮೆಚ್ಚುಗೆ ಗಳಿಸಿದ ಚಿತ್ರತಂಡ ಈಗ ‘ರೂಪಾಂತರ’ ಎನ್ನುವ ಸಿನಿಮಾ ಮಾಡಿ ಬಿಡುಗಡೆಗೆ ಸಿದ್ದವಾಗಿದೆ. ರಾಜ್ ಬಿ ಶೆಟ್ಟಿ ಮತ್ತು ಮಿಧುನ್ ಮುಕುಂದನ್ ಯಶಸ್ವಿ ಜೋಡಿಯಾಗಿ ಅನೇಕ ಹಿಟ್ ಹಾಡುಗಳನ್ನು ಕೊಡುತ್ತಾ ಬಂದಿದ್ದಾರೆ. ಈಗ ರೂಪಾಂತರ ಚಿತ್ರದ ಕಿತ್ತಾಳೆ ಹಾಡನ್ನು ಬಿಡುಗಡೆಗೊಳಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನವನ್ನು ಸೆಳೆದಿದ್ದಾರೆ.

ಈ ಹಿಂದೆ ಅನೇಕ ಚಿತ್ರಗಳಿಗೆ ರಾಜ್ ಸಾಹಿತ್ಯ ಬರೆದು ಮಿಧುನ್ ಸಂಗೀತ ನೀಡಿದ್ದರೂ ಈ ಹಾಡು ಇಬ್ಬರಿಗೂ ಚಿತ್ರರಂಗದಲ್ಲಿ ಹೊಸ ಗುರುತನ್ನು ನೀಡಲಿದೆ. ಮಿಧುನ್ ಅವರ ಹಿಂಪಾದ ಸಂಗೀತಕ್ಕೆ ರಾಜ್ ಅವರ ರಸಭರಿತ ಸಾಹಿತ್ಯ ಸಿಹಿಯಾದ ಕಿತ್ತಾಳೆ ಹಣ್ಣನ್ನು ಸವಿದಂತ ಅನುಭವವನ್ನು ನೀಡುತ್ತಿದೆ ಎಂದು ಅನೇಕ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. ಗರುಡ ಗಮನದ ಮಾದೇವ ಖ್ಯಾತಿಯ ಗಾಯಕಿ ಚೈತ್ರ ಜೆ ಆಚಾರ್ ಅವರು ಈ ಹಾಡಿಗೆ ಧ್ವನಿ ನೀಡಿದ್ದು ಇನ್ನೊಂದು ಹೈಲೈಟ್.

ನಿರೀಕ್ಷೆಯನ್ನು ಹೆಚ್ಚು ಮಾಡಿದ ರೂಪಾಂತರ :

ಮೊನ್ನೆಯಷ್ಟೆ ಫರ್ಸ್ಟ್ ಲುಕ್ ಪೋಸ್ಟರ್​​ ಮೂಲಕ ಗಮನ ಸೆಳೆದ ಮಿಥಿಲೇಶ್ ಎಡವಲತ್ ಅವರ ಚೊಚ್ಚಲ ಚಿತ್ರ ಇದಾಗಿದೆ. ಕನ್ನಡ ಚಿತ್ರರಂಗದಲ್ಲೊಂದು ಹೊಸ ಅಲೆಯನ್ನು ಸೃಷ್ಟಿ ಮಾಡುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ. ರಾಜ್ ಬಿ ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣೆ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್ ನ ಮೂಲಕ ತೆರೆಗೂ ತರುತ್ತಿದ್ದಾರೆ. ಒಂದು ಮೊಟ್ಟೆಯ ಕಥೆ ಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನೂ ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಹೊರಟಿದೆ.

ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ. ಹಾಡು ಲೈಟರ್ ಬುಧ್ಧ ಸಂಸ್ಥೆಯ ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದ್ದು, ಈ ಹೊಸ ಪ್ರಯತ್ನವನ್ನು ಕನ್ನಡಿಗರು ಸ್ವಾಗತಿಸುತ್ತಾರೆ ಎಂಬುದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರ್ವಾಂಕರ್ ಅವರ ಅಭಿಪ್ರಾಯ.

ಇದನ್ನೂ ಓದಿ : ‘ಕಡಲೂರ ಕಣ್ಮಣಿ’ ಸಿನಿಮಾ ರಿಲೀಸ್​ಗೆ ರೆಡಿ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here