ವಿರಾಜಪೇಟೆ : ಕೊಡಗು-ಕೇರಳ ಗಡಿಯ ಮಾಕುಟ್ಟ ಬಳಿ ಚಾಲಕನ ನಿಯಂತ್ರಣ ತಪ್ಪಿ ತೆಲಂಗಾಣ ರಾಜ್ಯಕ್ಕೆ ಸೇರಿದ ಲಾರಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಾಕುಟ್ಟದ ರಸ್ತೆ ಬದಿಯ ಅಂಬುಜ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಲಾರಿಯಲ್ಲಿದ್ದ ಜಾರ್ಖಂಡ್ ಮೂಲದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನುಳಿದ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಲಾರಿಯಲ್ಲಿ ಸಿಲುಕ್ಕಿದ್ದವರನ್ನು ಸ್ಥಳೀಯರು ರಕ್ಷಿಸಿದ್ದು, ಸದ್ಯ ಗಯಾಳುಗಳನ್ನು ಕೇರಳದ ಕಣ್ಣೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭಂವಿಸಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ.. 3 ಮನೆಗಳು ಸಂಪೂರ್ಣ ಹಾನಿ, ನಾಲ್ವರಿಗೆ ಗಾಯ..!
Post Views: 161