ಕೋಲಾರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೋಲಾರ ಜಿಲ್ಲೆಯ ಯಲುವಗುಳಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಮಾಲೂರು ತಾಲೂಕಿನ ಯಲುವಗುಳಿ ಗ್ರಾಮದಲ್ಲಿ ಕಳಪೆ ರಸ್ತೆ ಕಾಮಗಾರಿ, ಮೂಲಭೂತ ಸೌಲಭ್ಯಗಳು ಹಾಗೂ ಟೇಕಲ್ – ಯಲುವಗುಳಿ ರಸ್ತೆ ಕಾಮಗಾರಿ ವಿಳಂಬ ವಿಚಾರವಾಗಿ ಚುನಾವಣಾ ಬಹಿಷ್ಕಾರ ಹಾಕಲು ತೀರ್ಮಾನಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಗ್ರಾಮದಲ್ಲಿ ತಮಟೆ ಬಾರಿಸುತ್ತ ಚುನಾವಣಾ ಬಹಿಷ್ಕಾರ ಪ್ರಚಾರ ಮಾಡಲಾಗ್ತಿದ್ದು, ಯಾವುದೇ ಕಾರಣಕ್ಕೂ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ : ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ನಾಯಕರಿಂದ ಬಲ ಪ್ರದರ್ಶನ : 2ನೇ ದಿನವೂ ಸಿಎಂ ಸಿದ್ದು ಭರ್ಜರಿ ರೋಡ್ ಶೋ..!
Post Views: 116