Download Our App

Follow us

Home » ರಾಜಕೀಯ » ಎಲೆಕ್ಷನ್ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್ – ಕೊಪ್ಪಳ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ರಾಜೀನಾಮೆ..!

ಎಲೆಕ್ಷನ್ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್ – ಕೊಪ್ಪಳ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ರಾಜೀನಾಮೆ..!

ಕೊಪ್ಪಳ : ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವಾಗಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಸಂಸದ ಸ್ಥಾನ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ನಡೆಸಿದ್ದ ಸಂಧಾನ ವಿಫಲವಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಇ-ಮೇಲ್‌ ಮೂಲಕ ಸ್ಪೀಕರ್ ಓಂ ಬಿರ್ಲಾಗೆ ರಾಜೀನಾಮೆ ರವಾನಿಸಿದ್ದಾರೆ. ಇದೀಗ ಅಧಿಕೃತವಾಗಿ ಬಿಜೆಪಿಗೆ ರಾಜೀನಾಮೆ ನೀಡಿರುವ ಕರಡಿ ಸಂಗಣ್ಣ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದರೂ ಆಗಿದ್ದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ಕೊಡದೇ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿತ್ತು.

ಇದರಿಂದ ಆರಂಭದಿಂದಲೂ ಅಸಮಾಧಾನ ಹೊರ ಹಾಕಿದ್ದ ಕರಡಿ ಸಂಗಣ್ಣ ಅವರು, ನಮ್ಮ ಲೋಕಸಭಾ ಟಿಕೆಟ್‌ ಅನ್ನು ಪುನಃ ಬದಲಾಯಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಇದ್ಯಾವುದಕ್ಕೂ ಬಿಜೆಪಿ ಹೈಕಮಾಂಡ್ ಆಗಲೀ ಅಥವಾ ರಾಜ್ಯ ಬಿಜೆಪಿ ತಲೆಕೆಡಿಸಿಕೊಂಡಿರಲಿಲ್ಲ. ಬದಲಿಗೆ ಮುಂದಿನ ದಿನಗಳಲ್ಲಿ ಸ್ಥಾನಮಾನದ ಭರವಸೆ ನೀಡುವುದಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದ್ರೆ, ಇದೀಗ ಕರಡಿ ಸಂಗಣ್ಣ ಭರವಸೆಗಳನ್ನು ನಿರಾಕರಿಸಿ ಬಿಜೆಪಿಗೆ ಗುಡ್​ ಬೈ ಹೇಳಿದ್ದಾರೆ.

ಇದನ್ನೂ ಓದಿ : ಇಂದು ಮಂಡ್ಯ, ಕೋಲಾರದಲ್ಲಿ ರಾಹುಲ್‌ ಗಾಂಧಿ ರಣಕಹಳೆ : ಸಿದ್ದು, ಡಿಕೆಶಿ ಸಾಥ್..!

Leave a Comment

DG Ad

RELATED LATEST NEWS

Top Headlines

ಬಸ್ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ – 7 ಮಂದಿ ದಾರುಣ ಸಾವು..!

ಮುಂಬೈ : ಬಸ್‌ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರೋ ಘಟನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ. ಟ್ರಾನ್ಸ್‌ಪೋರ್ಟ್ ಸಂಸ್ಥೆಯ ಬಸ್

Live Cricket

Add Your Heading Text Here