Download Our App

Follow us

Home » ಸಿನಿಮಾ » ಡಾಲಿ ಧನಂಜಯ್​ ಅಭಿನಯದ ಬಹುನಿರೀಕ್ಷಿತ ‘ಕೋಟಿ’ ಸಿನಿಮಾ ಜೂ.14ಕ್ಕೆ ರಿಲೀಸ್​​​..!

ಡಾಲಿ ಧನಂಜಯ್​ ಅಭಿನಯದ ಬಹುನಿರೀಕ್ಷಿತ ‘ಕೋಟಿ’ ಸಿನಿಮಾ ಜೂ.14ಕ್ಕೆ ರಿಲೀಸ್​​​..!

ಇದೇ ಶುಕ್ರವಾರ ಬಿಡುಗಡೆಗೆ ಸಜ್ಜಾಗಿರುವ ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಈಗಾಗಲೇ ಟ್ರೇಲರ್ ಮತ್ತು ಹಾಡುಗಳು ಟ್ರೆಂಡ್ ಆಗಿದ್ದು, ಮಂಗಳವಾರದಿಂದ ಟಿಕೆಟ್ ಬುಕಿಂಗ್ ಓಪನ್ ಆಗ್ತಾ ಇದೆ.

ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು. ದಶಕಗಳ ಕಾಲ ಕಲರ್ಸ್ ಕನ್ನಡವನ್ನು ಮುನ್ನಡೆಸಿ ಯಶಸ್ಸಿನ ಅಲೆಯಲ್ಲಿ ತೇಲೆಸಿದ್ದ ಇವರು ಈಗ ನಿರ್ದೇಶನದ ಟೋಪಿ ತೊಟ್ಟಿದ್ದಾರೆ. ‘ಕೋಟಿ’ ತಂಡ ಬಹುಸಕ್ರಿಯವಾಗಿ ಸಿನಿಮಾ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು ಬಸ್ಸು, ಮೆಟ್ರೋ, ಟಿವಿ, ಯೂಟ್ಯೂಬ್, ಇನ್ಟಾಗ್ರಾಮ್ ಎಲ್ಲೆಡೆಯೂ ಕೋಟಿ ಸುದ್ದಿ ಮಾಡ್ತಾ ಇದೆ.

ಇತ್ತೀಚೆಗೆ ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ಪ್ರೀರಿಲೀಸ್ ವಿಶೇಷ ಟೀವಿ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ತಂಡಕ್ಕೆ ಶುಭ ಹಾರೈಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ನೀಡಿತು. ಹತ್ತಾರು ವರ್ಷ ಟೀವಿ, ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿರುವ ಪರಮ್ ಅವರಿಗೆ ಎಲ್ಲೆಡೆ ಸ್ನೇಹಿತರಿದ್ದಾರೆ. ಇದೇ ಬುಧವಾರ ‘ಕೋಟಿ’ ತಂಡ ಟೆಲಿವಿಷನ್ ಮತ್ತು ಸಿನಿಮಾತಾರೆಗಳಿಗೆ ಚಿತ್ರದ ಪ್ರೀಮಿಯರ್ ಶೋ ಆಯೋಜಿಸಿದ್ದು. ದೊಡ್ಡ ಸಂಖ್ಯೆಯಲ್ಲಿ ತಾರೆಗಳು ಸೇರುವ ನಿರೀಕ್ಷೆ ಇದೆ. ತಾರೆಗಳಿಗಾಗಿಯೇ ಎರಡೆರಡು ಪ್ರೀಮಿಯರ್ ಶೋಗಳನ್ನು ಆಯೋಜಿಸಿರುವುದೇ ಇದಕ್ಕೆ ಸಾಕ್ಷಿ. ಇದರ ಜತೆಗೆ ಸಿನಿರಸಿಕರಿಗಾಗಿ ಎರಡು ಪೇಯ್ಡ್ ಪ್ರೀಮಿಯರ್ ಶೋಗಳ ಸಹ ಇವೆ.

ಗುರುವಾರ ಮೈಸೂರಿನಲ್ಲಿ ಪೇಯ್ಡ್ ಪ್ರೀಮಿಯರ್ ಶೋಗಳಿದ್ದು, ಧನಂಜಯ್‌ ಮತ್ತು ಚಿತ್ರತಂಡ ಮೈಸೂರಿನ ಸಿನಿರಸಿಕರ ಜತೆ ಸಿನಿಮಾ ನೋಡಲಿದ್ದಾರೆ. ಕೋಟಿ ಸಿನಿಮಾ ಶುಕ್ರವಾರದಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ. ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ : ದರ್ಶನ್​ ವಿರುದ್ಧ ಸಿಕ್ತು ಮೆಗಾ ಎವಿಡೆನ್ಸ್​ – ಸಿಸಿಟಿವಿ ದೃಶ್ಯದಲ್ಲಿ ನಟ ದರ್ಶನ್ ಲಾಕ್​​..!

Leave a Comment

RELATED LATEST NEWS

Top Headlines

ನಟ ದುನಿಯಾ ವಿಜಯ್ ವಿಚ್ಛೇದನ ಕೋರಿದ ಅರ್ಜಿ ವಜಾ..!

ನಟ ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ 2018ರಲ್ಲಿ ವಿಚ್ಛೇದನ ವಿಚಾರವಾಗಿ ಕೋರ್ಟ್‌ ಮೆಟ್ಟಿಲು ಏರಿದ್ದರು. ಪತ್ನಿ ನಾಗರತ್ನರಿಂದ ಡಿವೋರ್ಸ್‌ ಬೇಕೇ ಬೇಕು ಎಂದು ದುನಿಯಾ ವಿಜಯ್

Live Cricket

Add Your Heading Text Here