2006… ಸ್ಯಾಂಡಲ್ವುಡ್ ಮುಂಗಾರು ಮಳೆಯಲ್ಲಿ ನೆಂದು ಹೋಗಿತ್ತು. ಅಂದು ಮುಂಗಾರು ಮಳೆ ಕೊಟ್ಟ ಗೋಲ್ಡನ್ ಸ್ಟಾರ್ ಮತ್ತೊಂದು ಹಿಟ್ ಸಿನಿಮಾದ ಮೂಲಕ ಎಂಟ್ರಿ ಕೊಡಲು ಇದೀಗ ರೆಡಿಯಾಗಿದ್ದಾರೆ.
ಹೌದು, ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರು ಇದೀಗ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಮೂಲಕ ಆಗಸ್ಟ್ 15ರಂದು ಅಭಿಮಾನಿಗಳ ಮುಂದೆ ಬರಲಿದ್ದಾರೆ. ಈ ಸಿನಿಮಾದ ಹಾಡುಗಳು ಈಗಾಗಲೇ ಬಿಡುಗಡೆ ಆಗಿ ಸೂಪರ್ ಡೂಪರ್ ಹಿಟ್ ಆಗಿವೆ. ಅದರಲ್ಲೂ ಈ ಸಿನಿಮಾದ ದ್ವಾಪರ ದಾಟುತಾ’ ಸಾಂಗ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೆಂಡ್ ಸೃಷ್ಟಿಸಿದೆ. ಇನ್‌ಸ್ಟಾಗ್ರಾಮ್, ಟ್ವಿಟರ್, ಯೂಟ್ಯೂಬ್‌ನಲ್ಲಿ ಮಿಲಿಯನ್‌ಗಟ್ಟಲೇ ವೀವ್ಸ್ ಪಡೆದುಕೊಂಡಿದೆ.
ಮಧುರವಾದ ಹಾಡುಗಳಿಂದಲೇ ನಿರೀಕ್ಷೆ ಹುಟ್ಟಿಸಿರುವ ಈ ನಿಸಿಮಾದ ಪೇಯ್ಡ್ ಪ್ರೀಮಿಯರ್ ಶೋ ಗೆ ಕೆಲವೆಡೆ ಮಾತ್ರ ಚಿತ್ರತಂಡ ಪ್ಲಾನ್ ಮಾಡಿತ್ತು. ಈಗಾಗಲೇ ಪೇಯ್ಡ್ ಪ್ರೀಮಿಯರ್ ಶೋಗೆ ಫ್ಯಾನ್ಸ್ ಟಿಕೆಟ್ ಪಡೆದು ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡೋಕೆ ಕಾತುರದಲ್ಲಿದ್ದಾರೆ. ಇದರಿಂದಾಗಿ ಒಂದು ದಿನ ಮುಂಚಿತವಾಗಿಯೇ ಶೋ ಹೌಸ್ ಫುಲ್ ಆಗಿದೆ. ಈ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್ಗೆ ಗೋಲ್ಡನ್ ಟೈಂ ಶುರುವಾದಂತಿದೆ.
ಈಗಾಗಲೇ ರಾಜ್ಯಾದ್ಯಂತ 300 ಕ್ಕೂ ಹೆಚ್ಚು ಪ್ರದರ್ಶನಕ್ಕೆ ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈ ಸಿನಿಮಾವನ್ನು ತ್ರಿಶೂಲ್ ಎಂಟರ್‌ಟೇನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ರುದ್ರಪ್ಪ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ. ವೆಂಕಟ್ ರಾಮ್ ಪ್ರಸಾದ್ ಛಾಯಾಗ್ರಹಣ ಮಾಡಿದ್ದಾರೆ.
ಇನ್ನು ಗಣೇಶ್ ನಟಿಸುತ್ತಿರುವ 41ನೇ ಸಿನಿಮಾ ಇದಾಗಿದ್ದು, ಮಾಳವಿಕ ನಾಯರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಶರಣ್ಯ ಶೆಟ್ಟಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು ತಾರಾಗಣದಲ್ಲಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು – ಆಗಿದ್ದೇನು?