ಬಾಗಲಕೋಟೆ : KSRTC ಬಸ್ ಅಪಘಾತಕ್ಕೀಡಾಗಿದ್ದು ಪ್ರಯಾಣಿಕರು ಸಾವಿನ ದವಡೆಯಿಂದ ಜಸ್ಟ್ ಮಿಸ್ ಆಗಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಮನ್ನಿಕಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಬೆನ್ನೂರು ಗ್ರಾಮದಿಂದ ಬಾಗಲಕೋಟೆ ಕಡೆಗೆ ಬರ್ತಿದ್ದ ಸರ್ಕಾರಿ ಬಸ್ ಎದುರಿಗೆ ಬಂದ ಟ್ಯಾಂಕರ್ ತಪ್ಪಿಸಲು ಹೋಗಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಬದಿಯಲ್ಲಿ 120 ಡಿಗ್ರಿಯಲ್ಲಿ ವಾಲಿದೆ.
ರಸ್ತೆ ಬದಿಯಲ್ಲಿ ವಾಲಿದ್ದ ಬಸ್ನಲ್ಲಿದ್ದ ಪ್ರಯಾಣಿಕರು ಕಿಟಕಿ ಗಾಜು ಹೊಡೆದು ಬಸ್ನಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನಾಲ್ಕೈದು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ : ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಅಂದಿದ್ದಕ್ಕೆ ತಂಗಿಯನ್ನೇ ಕೊಲೆಗೈದ ಅಣ್ಣ..!
Post Views: 506