ಚಿತ್ರದುರ್ಗ : KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡ ಬಳಿ ನಡೆದಿದೆ. ಪರಿಣಾಮ ಶಾಲಾ ವಿದ್ಯಾರ್ಥಿಗಳು ಸೇರಿ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.
ಓಬಳಾಪುರ ತಾಂಡದಿಂದ ಜವನಗೊಂಡನಹಳ್ಳಿ ಕಡೆ ಬಸ್ ಹೋಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿದ್ದಾರೆ. ಸದ್ಯ ಗಾಯಾಳುಗಳನ್ನ ಹಿರಿಯೂರಿನಲ್ಲಿ ಸಾರ್ವಜನಿಕರ ಆಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಲೆಜೆಂಡರಿ ನಟ ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ..!
Post Views: 291