ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ನಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ನಲ್ಲಿ ಆರಂಭವಾಗಲಿದೆ.
ಈ ಚಿತ್ರವನ್ನು ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಸಕಲೇಶ ಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ನಡೆಯಲಿದೆ.
ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ತಾರಾಬಳಗದಲ್ಲಿ ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ನಟಿಸಿದ್ದಾರೆ.
ಇದನ್ನೂ ಓದಿ : ಲೂಟಿಕೋರರಿಗೆ ನಾವು ದುಡ್ಡು ಕೊಡೋಕಾಗುತ್ತಾ? – ಆಪರೇಷನ್ ಕಮಲ ಆರೋಪಕ್ಕೆ ಶಾಸಕ ಅಶ್ವಥ್ ನಾರಾಯಣ ತಿರುಗೇಟು..!