Download Our App

Follow us

Home » ಮೆಟ್ರೋ » ಕುಂಬಳಗೋಡು ಪರ್ಫ್ಯೂಮ್ ಕಾರ್ಖಾನೆ ಅಗ್ನಿ ದುರಂತ : ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ..!

ಕುಂಬಳಗೋಡು ಪರ್ಫ್ಯೂಮ್ ಕಾರ್ಖಾನೆ ಅಗ್ನಿ ದುರಂತ : ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ..!

ಬೆಂಗಳೂರು : ಕುಂಬಳಗೋಡು ಪರ್ಫ್ಯೂಮ್ ಕಾರ್ಖಾನೆ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಸಜೀವದಹನಗೊಂಡು ಐವರು ಗಾಯಗೊಂಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಯಾನ್​ ಪಾಷಾ ಎಂಬ ಬಾಲಕ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಗಾಯಗೊಂಡ ಐವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಚಿಕಿತ್ಸೆ ಪಡೆಯುತ್ತಿರುವ ಮೂವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಬೆಂಗಳೂರು ನಗರದ ಹೊರವಲಯದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿತ್ತು.

ಪರ್ಫ್ಯೂಮ್ ಫಿಲ್ಲಿಂಗ್ ಮಾಡುವ ವೇಳೆ ಈ ಘಟನೆ ನಡೆದಿದ್ದು, ಮನೆಯೊಂದರಲ್ಲಿ ಪರ್ಫ್ಯೂಮ್ ಕಾರ್ಖಾನೆ ನಡೆಸಲಾಗುತ್ತಿತ್ತು. ಇಲ್ಲಿ ಒಟ್ಟು ಎಂಟು ಜನರು ಪರ್ಫ್ಯೂಮ್ ಫಿಲ್ಲಿಂಗ್ ಕೆಲಸ ಮಾಡುತ್ತಿದ್ದರು. ನೋಡ ನೋಡುತ್ತಿದ್ದಂತೆ ಬೆಂಕಿ ಆವರಿಸಿಕೊಂಡಿದ್ದು, ಅಲ್ಲಿಂದ ಹೊರಗೆ ಬರಲಾಗದೇ ಮೂವರು ಸಜೀವ ದಹನವಾಗಿದ್ದರು.

ಇದನ್ನೂ ಓದಿ : ಕಾಂಗ್ರೆಸ್​ನಲ್ಲೂ ಮಂಡ್ಯ ಗೆಲ್ಲುವ ರಣತಂತ್ರ : ಬೆಂಗಳೂರಿನಲ್ಲಿ ಒಕ್ಕಲಿಗ ಕಾಂಗ್ರೆಸ್ ನಾಯಕರ ಸಭೆ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here