Download Our App

Follow us

Home » ಜಿಲ್ಲೆ » ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್​ – ಯತ್ನಾಳ್​ ಸೇರಿ ಹಲವರು ಪೊಲೀಸರ ವಶಕ್ಕೆ..!

ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್​ – ಯತ್ನಾಳ್​ ಸೇರಿ ಹಲವರು ಪೊಲೀಸರ ವಶಕ್ಕೆ..!

ಬೆಳಗಾವಿ : ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಚ್‌ ನಡೆದಿದೆ. 2A ಮೀಸಲಾತಿಗೆ ಒತ್ತಾಯಿಸಿ ಸಾವಿರಾರು ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಸಾವಿರ ಹೋರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಪೊಲೀಸರು ಮತ್ತು ಪಂಚಮಸಾಲಿ ಸಮಾಜದ ಜನರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹೀಗಾಗಿ ಆಕ್ರೋಶಗೊಂಡ ಹೋರಾಟಗಾರರು ಸಹ ಪೊಲೀಸರ ಜತೆ ವಾಗ್ದಾದ ನಡೆಸಿದ್ದಾರೆ. ಅಲ್ಲದೇ ಬ್ಯಾರಿಕೇಡ್​ಗಳನ್ನು ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸುತ್ತಿದ್ದಾರೆ. ಲಾಠಿಚಾರ್ಜ್​ ವೇಳೆ ಪಂಚಮಸಾಲಿ ಹೋರಾಟಗಾರನ ತಲೆಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಬೃಹತ್ ಪ್ರಮಾಣದ ಹೋರಾಟಗಾರರು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಷ್ಟ್ರೀಯ ಹೆದ್ದಾರಿ- 4 ತಡೆದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್​, ಜಯಮೃತ್ಯುಂಜಯ ಶ್ರೀಗಳು, ಮಾಜಿ ಸಚಿವ ಶಂಕರ್​ ಪಾಟೀಲ್​ ಮುನೇನಕೊಪ್ಪ ಸೇರಿದಂತೆ ಹಲವರನ್ನ ಪೋಲಿಸರ ವಶಕ್ಕೆ ಪಡೆದರು.

ಇದನ್ನೂ ಓದಿ : ಬಳ್ಳಾರಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ – ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ..!

Leave a Comment

DG Ad

RELATED LATEST NEWS

Top Headlines

ನಿಗದಿಗಿಂತ ಹೆಚ್ಚಿನ ಹಣಕ್ಕಾಗಿ ಗಲಾಟೆ – ನಡು ರಸ್ತೆಯಲ್ಲೇ ಪ್ರಯಾಣಿಕನಿಗೆ ನಿಂದಿಸಿ ಹಲ್ಲೆಗೆ ಯತ್ನಿಸಿದ ಚಾಲಕ..!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಿಗದಿಗಿಂತ ಹೆಚ್ಚಿನ ಹಣ ನೀಡುವಂತೆ ಓಲಾ ಕ್ಯಾಬ್ ಡ್ರೈವರ್ ಕ್ಯಾತೆ ತೆಗೆದಿದ್ದು, ಚಾಲಕ ನಡು ರಸ್ತೆಯಲ್ಲೇ ಪ್ರಯಾಣಿಕನಿಗೆ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ.

Live Cricket

Add Your Heading Text Here