Download Our App

Follow us

Home » ಮೆಟ್ರೋ » ಹೈಕೋರ್ಟ್​ ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ ಕೇಸ್‌ ತನಿಖೆ ಸಿಸಿಬಿಗೆ ವರ್ಗಾವಣೆ..!

ಹೈಕೋರ್ಟ್​ ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ ಕೇಸ್‌ ತನಿಖೆ ಸಿಸಿಬಿಗೆ ವರ್ಗಾವಣೆ..!

ಬೆಂಗಳೂರು : ಇತ್ತೀಚೆಗಷ್ಟೇ ಅನುಮಾನಾಸ್ಪದ ಸಾವಿಗೀಡಾಗಿದ್ದ ಹೈಕೋರ್ಟ್ ವಕೀಲೆ, ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾ ಗೌಡ ಆತ್ಮಹತ್ಯೆ ಪ್ರಕರಣವನ್ನು ಸಿಸಿಬಿ ತನಿಖೆಗೆ ಹಸ್ತಾಂತರಿಸಲಾಗಿದೆ. ಮೇ 11ರಂದು ಸಂಜಯನಗರ ಠಾಣೆಯಲ್ಲಿ ಚೈತ್ರಾ ಗೌಡ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.

ಕೆಐಡಿಬಿ ಅಧಿಕಾರಿ ಶಿವಕುಮಾರ್ ಅವರ ಪತ್ನಿಯಾಗಿದ್ದ ಚೈತ್ರಾ ಗೌಡ ಹೈಕೋರ್ಟ್ ವಕೀಲರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಚೈತ್ರಾ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರು ನಗರ ವಕೀಲರ ಸಂಘದಿಂದ ಕೂಡ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆಯಲಾಗಿತ್ತು. ಚೈತ್ರಾ ಅತ್ಯಂತ ದಿಟ್ಟ ಹಾಗೂ ಧೈರ್ಯವಂತೆ ಆಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದು ವಕೀಲರ ಸಂಘ ತಿಳಿಸಿತ್ತು. ಈ ಹಿನ್ನೆಲೆ ಇದೀಗ ನಗರ ಪೊಲೀಸ್ ಆಯುಕ್ತ ದಯಾನಂದ್​ ಅವರು ಪ್ರಕರಣದ ತನಿಖೆಯನ್ನು ​​​CCBಗೆ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.

ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕರೆ ಲಿಸ್ಟ್​ ಮತ್ತು ಹಣಕಾಸು ವ್ಯವಹಾರದ ಪರಿಶೀಲನೆಗೆ ಮುಂದಾಗಿದೆ. ಅಲ್ಲದೆ, ಜೊತೆಗೆ ಚೈತ್ರಾ ಸಾವಿನ ಹಿಂದಿನ 15 ದಿನಗಳ ಸಿಸಿಟಿವಿ ಚೆಕ್​ ಮಾಡಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಕೈಸೇರಿದ ಬಳಿಕ ಸಾವಿನ ಹಿಂದಿನ ರಹಸ್ಯ ಭೇದಿಸಲು ಸಿಸಿಬಿ ತಯಾರಿ ನಡೆಸಿದೆ.

ಸಂಜಯನಗರ ಪೊಲೀಸರ ತನಿಖೆ ಪ್ರಕಾರ, ಮಾನಸಿಕ ಖಿನ್ನತೆಯಿಂದಾಗಿ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಹಿಂದೆ ಯಾರ ಕೈವಾಡ ಇಲ್ಲದಿರುವುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಅವರೇ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದಾಗಿ ಪೊಲೀಸರು ದೃಢಪಡಿಸಿಕೊಂಡಿದ್ದರು. ಪತ್ತೆಯಾಗಿದ್ದ ಡೆತ್​​ನೋಟ್ ಬಗ್ಗೆ ತನಿಖೆ ನಡೆಸಿದಾಗ ಅವರೇ ಬರೆದಿರುವುದು ಖಚಿತವಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಆರಂಭದಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪತಿ ಶಿವಕುಮಾರ್ ಅವ​​ರನ್ನು ಕರೆದು ವಿಚಾರಣೆ‌‌ ನಡೆಸಿದ್ದರು. ಪತ್ನಿಯೊಂದಿಗೆ ಯಾವುದೇ ವೈಷ್ಯಮ್ಯ ಇಲ್ಲ, ನಾವು ಅನ್ಯೋನ್ಯವಾಗಿದ್ದೆವು. ಅಲ್ಲದೆ, ವೃತ್ತಿ ವೈಷಮ್ಯ ಹಾಗೂ ಹಣಕಾಸಿನ ವಿಚಾರದಲ್ಲಿಯೂ ಯಾವುದೇ ಕಿರಿಕಿರಿ ಇರಲಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದರು‌‌ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್​​ಗೆ ಮೇಜರ್ ಟ್ವಿಸ್ಟ್ : ಚಂದ್ರಶೇಖರ್ ಮೇಲೆ ನೇರ ಒತ್ತಡ ಹೇರಿದ್ದ ಸಚಿವರು..!

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here