ದೆಹಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದೀಗ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡ ಬಿಜೆಪಿ ಪಕ್ಷಕ್ಕೆ ಸೇರುತ್ತಾರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ.
ನಿನ್ನೆವರೆಗೂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ. ಲಕ್ಷ್ಮಣ್ ಸವದಿಯನ್ನ ಕರೆಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಮಹತ್ವದ ಚರ್ಚೆ ನಡೆಸಿದ್ದರು. ಇದಾದ ಮೇಲೆ ದೆಹಲಿಗೆ ತೆರಳಿರುವ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
2023ರ ವಿಧಾನಸಭೆ ಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದು ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದರು. ಇದೀಗ ರಿವರ್ಸ್ ಆಪರೇಷನ್ ಶುರು ಮಾಡಿರುವ ಬಿಜೆಪಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ಮುಂದಾಗಿದೆ.
ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷ ಸೇರ್ಪಡೆಯಾಗಿರುವುದರಿಂದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಗೊಂದಲಕ್ಕೆ ಸಿಲುಕಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗಿನ ಮಾತುಕತೆ ವೇಳೆಯೂ ಸವದಿ ಅವರು ನಾನು ಕಾಂಗ್ರೆಸ್ ಪಕ್ಷ ತೊರೆಯೋದಿಲ್ಲ ಎಂದು ಹೇಳಿ ಬಂದಿದ್ದಾರೆ. ಇದೀಗ ಬಿಜೆಪಿ ನಾಯಕರು ಸವದಿ ಅವರ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಭವಿಷ್ಯದ ರಾಜಕೀಯ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಅವರು ಕಾಂಗ್ರೆಸ್‌ನಲ್ಲೇ ಉಳಿಯಬೇಕೋ ಇಲ್ಲವೇ ಬಿಜೆಪಿಗೆ ವಾಪಸ್ ಆಗಬೇಕೋ ಅನ್ನೋ ಗೊಂದಲಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ : ಬಿಜೆಪಿಗೆ ಜಗದೀಶ್ ಶೆಟ್ಟರ್ ಸೇರ್ಪಡೆ – ಕಾಂಗ್ರೆಸ್‌ಗೆ ಅಧಿಕೃತವಾಗಿ ಗುಡ್ಬೈ ಹೇಳಿದ ಶೆಟ್ಟರ್..!