Download Our App

Follow us

Home » ಸಿನಿಮಾ » ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ – ಶೀಘ್ರದಲ್ಲೇ ಚಿತ್ರ ತೆರೆಗೆ..!

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ – ಶೀಘ್ರದಲ್ಲೇ ಚಿತ್ರ ತೆರೆಗೆ..!

ಸ್ಯಾಂಡಲ್‌ವುಡ್‌ ದೂದ್‌ ಪೇಡ ದಿಗಂತ್ ನಾಯಕನಾಗಿ ನಟಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಹೊಸ ಪೋಸ್ಟರ್​​ರನ್ನು ಚಿತ್ರತಂಡ ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನದಂದೇ ಬಿಡುಗಡೆ ಮಾಡಿದೆ. ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಚಿತ್ರ ಕಟ್ಟಿಕೊಡಲಾಗಿದ್ದು, ಅದರಂತೆಯೇ ಪೋಸ್ಟರ್ ಕೂಡ ಆಕರ್ಷಕವಾಗಿದೆ. ಸೆಟ್ಟೇರಿದ ದಿನದಂದಲೂ ಚಿತ್ರತಂಡ ವಿಭಿನ್ನ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಹೆಚ್ಚು ಮಾಡಿದೆ.

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ.

ದೂದ್ ಪೇಡ ದಿಗಂತ್ ನಾಯಕ ನಟನಾಗಿ ನಟಿಸಿರುವ ಈ ಚಿತ್ರಕ್ಕೆ ಹೊಸ ನಟಿ ಧನು ಹರ್ಷ ಜೋಡಿಯಾಗಿದ್ದಾರೆ. ಇನ್ನು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇನ್ನು ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

ಯಾವಾಗ ರಿಲೀಸ್?

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ತೆರೆಗೆ ಬರಲು ಸಜ್ಜಾಗಿದೆ. ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದು, ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರಲಿದೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ವಿರುದ್ಧ 2 ಖಾಸಗಿ ದೂರು – ಆದೇಶ ಕಾಯ್ದಿರಿಸಿದ ಕೋರ್ಟ್..!

Leave a Comment

DG Ad

RELATED LATEST NEWS

Top Headlines

ಮಂಗಳೂರಲ್ಲಿ ಕಿಡಿಗೇಡಿಗಳಿಂದ ಪ್ರಾರ್ಥನಾ ಸ್ಥಳದ ಮೇಲೆ ಕಲ್ಲೆಸೆತ – ಕರಾವಳಿಯ ಅಲ್ಲಲ್ಲಿ ಪರಿಸ್ಥಿತಿ ಉದ್ವಿಗ್ನ..!

ಮಂಗಳೂರು : ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಪ್ರಾರ್ಥನಾ ಸ್ಥಳದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ. ಕಾಟಿಪಳ್ಳ 3ನೇ

Live Cricket

Add Your Heading Text Here