Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ.. ಭಯಭೀತರಾದ ಜನ..!

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ.. ಭಯಭೀತರಾದ ಜನ..!

ಬೆಂಗಳೂರು : ಬೆಂಗಳೂರಿನ ಹುಣಸಮಾರನಹಳ್ಳಿ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಯಲಹಂಕ ಏರ್ಫೋಸ್​ನ ಹಿಂಭಾಗದ ಕೆರೆ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಕಟ್ಟಡ ಕಾರ್ಮಿಕರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಇದೀಗ ಈ ವೀಡಿಯೋ ವೈರಲ್ ಆಗಿದೆ. ಇದರಿಂದ ಜನರು ಆತಂಕಗೊಂಡಿದ್ದಾರೆ.

ನೆಲ್ಲಕುಂಡೆ, ಗಂಡಿಗೆಹಳ್ಳಿ ನಡುವೆ ಸುಳಿದಾಡುತಿದೆ ಎಂದು ತಿಳಿದುಬಂದಿದ್ದು, ಕೂಡಲೇ ಸ್ಥಳೀಯರು ಯಲಹಂಕ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಕಳೆದ ಭಾನುವಾರವು ಸಹ ಚಿರತೆ ಪ್ರತ್ಯಕ್ಷವಾಗಿತ್ತು. ಇದೀಗ ಮತ್ತೊಮ್ಮೆ ಚಿರತೆ ಕಾಣಿಸಿಕೊಂಡಿದ್ದು, ಜನ ಭಯಭೀತರಾಗಿದ್ದಾರೆ.

ಪದೇಪದೆ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಭಯವಾಗ್ತಿದೆ. ಮಕ್ಕಳು ಹಾಗೂ ಮಹಿಳೆಯರು ಹೆಚ್ಚಾಗಿ ಇಲ್ಲಿ ಓಡಾಡುತ್ತಾರೆ. ಹುಣಸಮಾರನಹಳ್ಳಿಯಲ್ಲಿ ಬೆಳಗ್ಗೆ ಜನರು ವಾಕಿಂಗ್ ಬರ್ತಾರೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಇಂದು ನಟ ದರ್ಶನ್​ ಪಾಲಿಗೆ ಬಿಗ್ ಡೇ.. ಮಧ್ಯಂತರ ಜಾಮೀನು ಸಿಗುತ್ತಾ?

 

 

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ದೀಪಾವಳಿ ಸಿಹಿ.. ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್​ಗೆ ಬಿಗ್​ ರಿಲೀಫ್ ಸಿಕ್ಕಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ

Live Cricket

Add Your Heading Text Here