Download Our App

Follow us

Home » ಸಿನಿಮಾ » ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ‘Lions roar’ ಸಾಂಗ್​ ರಿಲೀಸ್​​ – ಡಿ.25ರಂದು‌ ಚಿತ್ರ ತೆರೆಗೆ..!

ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ‘Lions roar’ ಸಾಂಗ್​ ರಿಲೀಸ್​​ – ಡಿ.25ರಂದು‌ ಚಿತ್ರ ತೆರೆಗೆ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​​ ನಟನೆಯ ಬಹುನೀರಿಕ್ಷಿತ ಸಿನಿಮಾ ‘ಮ್ಯಾಕ್ಸ್’ ಇದೇ ಡಿ.25ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಇದೀಗ ‘ಮ್ಯಾಕ್ಸ್’ ಚಿತ್ರಕ್ಕಾಗಿ ಅನೂಪ್ ಭಂಡಾರಿ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ “Lions roar” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಯಿತು.

ಓರಾಯನ್ ಮಾಲ್​ನ ಆವರಣದಲ್ಲಿರುವ ಕೆರೆಯಂಗಳದಲ್ಲಿ‌ ನಡೆದ ವರ್ಣರಂಜಿತ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು. “ಮ್ಯಾಕ್ಸ್” ಚಿತ್ರದ ಹಾಡಿಗೆ ಹಾಗೂ ಟ್ರೇಲರ್​ಗೆ ಅಭಿಮಾನಿಗಳು ಫಿದಾ ಆದರು. ಕಿಚ್ಚ ಸುದೀಪ್, ನಿರ್ಮಾಪಕ ಕಲೈಪುಲಿ ಎಸ್ ತನು, ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

‘Lions roar’ ಹಾಡಿನ ಲಿರಿಕಲ್ ವಿಡಿಯೋ ರಿಲೀಸ್​​ ಬಳಿಕ ಮಾತನಾಡಿದ ನಾಯಕ ಸುದೀಪ್ ಅವರು, ನಿಮ್ಮೆನೆಲ್ಲಾ ನೋಡಿ ಬಹಳ ಖುಷಿಯಾಗುತ್ತಿದೆ. ಎರಡುವರೆ ವರ್ಷಗಳ ನಂತರ ಡಿಸೆಂಬರ್ 25 ರಂದು ನನ್ನ ಅಭಿನಯದ “ಮ್ಯಾಕ್ಸ್” ಚಿತ್ರ ಬಿಡುಗಡೆಯಾಗುತ್ತಿದೆ. ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ನಾವು ಲೇಟಾಗಿ ಬಂದರೂ ಲೇಟೆಸ್ಟಾಗಿ ಬರುತ್ತೇವೆ‌. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು.

ಇಷ್ಟು ಜನ ಸುದೀಪ್ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ‌ ಎಸ್ ತನು, ಡಿ.25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಮ್ಮೆಲ್ಲರ ಬೆಂಬಲವಿರಲಿ ಎಂದರು. ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು.

ಇನ್ನು ಮ್ಯಾಕ್ಸ್” ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿರುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಮತ್ತು ಮುಂತಾದವರು ಈ ಚಿತ್ರದಲ್ಲಿ ನಟಿಸಿರುತ್ತಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನ‌ರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನ‌ರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿರುತ್ತಾರೆ.

ಇದನ್ನೂ ಓದಿ : ರಣರಂಗವಾಯ್ತು ಬಿಗ್​​ಬಾಸ್​​ ಮನೆ – ಚೆಂಡಿಗಾಗಿ ಕಿತ್ತಾಡಿಕೊಂಡ ಸ್ಪರ್ಧಿಗಳು..!

Leave a Comment

DG Ad

RELATED LATEST NEWS

Top Headlines

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಸಿನಿಮಾದ 2ನೇ ಹಾಡು ರಿಲೀಸ್ – ಚಿತ್ರತಂಡಕ್ಕೆ ಗೋವಾ ಸಿಎಂ ಸಾಥ್..!

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಜನವರಿ 14ರಂದು ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಬಿಡುಗಡೆಯಾಗಿದೆ. ಗೋವಾದ ಸಿಎಂ ಪ್ರಮೋದ ಸಾವಂತ್

Live Cricket

Add Your Heading Text Here