ಬೆಂಗಳೂರು : ರಾಜ್ಯದಲ್ಲಿ ಮುಡಾ ಹಗರಣ ಸದ್ದು ಮಾಡುತ್ತಿರುವಾಗಲೇ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಭ್ರಷ್ಟಾಚಾರದ ವಿರುದ್ಧ ಸಿಡಿದ ಮದ್ಯಮಾರಾಟಗಾರರು ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ನ.20 ರಂದು ರಾಜ್ಯಾದ್ಯಂತ ಬಾರ್ ಬಂದ್ಗೆ ನಿರ್ಧಾರ ಮಾಡಿದ್ದಾರೆ.
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಅಧಿಕಾರಿಗಳ ವರ್ಗಾವಣೆಗೆ ಕೋಟ್ಯಂತರ ರೂ. ಲಂಚ ಪಡೆದಿದ್ದಾರೆ ಎಂದು ರಾಜ್ಯಪಾಲರಿಗೆ ಪ್ರತ್ಯೇಕ ದೂರೊಂದು ಸಲ್ಲಿಕೆಯಾಗಿದೆ. ಅಲ್ಲದೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಮದ್ಯ ಮಾರಾಟಗಾರರು ಇದೀಗ ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.
ಸರ್ಕಾರದ ಅಪರ ಕಾರ್ಯದರ್ಶಿ ಜೊತೆ ಮದ್ಯಮಾರಾಟಗಾರರು ಸಭೆ ನಡೆಸಿದ್ದು, ಫೆಡರೇಶನ್ ಆಫ್ ಮರ್ಚೆಂಟ್ಸ್ ಅಸೋಸಿಯೇಷನ್ನ ಭೇಟಿ ಮಾಡಿದ್ದಾರೆ. ಸರ್ಕಾರದ ಅಪರ ಕಾರ್ಯದರ್ಶಿ ಎಲ್.ಕೆ ಅತೀಕ್, ಜಾಫರ್ ಜೊತೆಗೆ ಸಭೆ ನಡೆಸಿದ್ದು, ಶೀಘ್ರವೇ ಸಿಎಂ ಭೇಟಿ ಆಗುತ್ತೇವೆ ಎಂದು ಅಧಕ್ಷ ಗುರುಸ್ವಾಮಿ ಹೇಳಿದ್ದಾರೆ. ಅಬಕಾರಿ ಇಲಾಖೆಯ ಕೋಟಿ-ಕೋಟಿ ಹಗರಣದ ಬಗ್ಗೆ ಅಧಕ್ಷ ಗುರುಸ್ವಾಮಿ ಇಂಚಿಂಚೂ ಮಾಹಿತಿ ಕೊಟ್ಟಿದ್ದಾರೆ.
ಇದನ್ನೂ ಓದಿ : ಸಲ್ಮಾನ್ ಖಾನ್ ಬೆನ್ನಲ್ಲೇ ಶಾರುಖ್ ಖಾನ್ಗೆ ಜೀವ ಬೆದರಿಕೆ..!