Download Our App

Follow us

Home » ಅಪರಾಧ » ಕೋಲಾರದಲ್ಲಿ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ- ಗಂಭೀರ ಗಾಯ, ಪ್ರಕರಣ ದಾಖಲು..!

ಕೋಲಾರದಲ್ಲಿ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ- ಗಂಭೀರ ಗಾಯ, ಪ್ರಕರಣ ದಾಖಲು..!

ಕೋಲಾರ : ಹಿರಿಯ ಸಾಹಿತಿ, ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಕೋಲಾರದ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಮುನೇಶ್ವರ ದೇಗುಲ ಬಳಿ ನಡೆದಿದೆ. ಮಂಜುನಾಥ್, ಬೈರಪ್ಪ ಹಾಗೂ ಸುಬ್ಬು ಎಂಬ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳು.

ದೇವಸ್ಥಾನವೊಂದರಲ್ಲಿ ಗ್ರಾಮಸ್ಥರಿಗೆ ಕಿರಿಕಿರಿಯಾಗುವಂತೆ ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಜೋರಾಗಿ ಮೈಕ್ ಹಾಕಲಾಗಿತ್ತು. ಈ ವೇಳೆ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯನವರು ಓದಲು ತೊಂದರೆ ಆಗುತ್ತೆ. ಮೈಕ್ ಶಬ್ದ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಇಷ್ಟಕ್ಕೇ ರೊಚ್ಚಿಗೆದ್ದ ಮಂಜುನಾಥ, ಬೈರಪ್ಪ ಹಾಗೂ ಸುಬ್ಬು ಕೋಟಿಗಾನಹಳ್ಳಿ ರಾಮಯ್ಯ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಕಿಡಿಗೇಡಿಗಳು ಹಲ್ಲೆ ಮಾಡಿದ ಪರಿಣಾಮ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಕಣ್ಣಿಗೆ ಹಾಗೂ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಸದ್ಯ ಕೋಲಾರದ  ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಜಿಲ್ಲಾಸ್ಪತ್ರೆಗೆ ಕೋಲಾರ SP ನಾರಾಯಣ್ ಭೇಟಿ ನೀಡಿ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಆರೋಗ್ಯ ವಿಚಾರಿಸಿ, ಮಾಹಿತಿ ಪಡೆದಿದ್ದಾರೆ.

ಇನ್ನು ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಲ್ಲೆ ಮಾಡಿದ ಮಂಜುನಾಥ್ ಎಂಬಾತನನ್ನು​ ಬಂಧಿಸಿದ್ದಾರೆ.  ಉಳಿದ ಆರೋಪಿಗಳನ್ನೂ ಶೀಘ್ರವಾಗಿ ಬಂಧಿಸಿ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ನೀಡಿದ್ದಾರೆ.

ಇದನ್ನೂ ಓದಿ : ಚಿಕ್ಕೋಡಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ ನಗದು ವಶಕ್ಕೆ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here