ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ SI ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನುನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್ಕಾನ್ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಇದನ್ನೂ ಓದಿ : ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲು ವಿಚಾರ – ಸ್ಪಷ್ಟನೆ ನೀಡಿದ ಸಿಎಂ ಕಚೇರಿ.. ಹೇಳಿದ್ದೇನು?