ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಇಡೀ ದೇಶವೇ ಎದುರು ನೋಡುತ್ತಿದ್ದ ಸಾರ್ವತ್ರಿಕ ಚುನಾವಣೆಗೆ ಇಂದು ಮುಹೂರ್ತ ನಿಗಧಿ ಆಗಿದೆ. ಲೋಕಸಭೆ ಚುನಾವಣೆ 2024ರ ದಿನಾಂಕ, ವೇಳಾಪಟ್ಟಿ ಮತ್ತು ಇತರೆ ವಿವರಗಳನ್ನು ಭಾರತದ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ.
ಭಾರತೀಯ ಚುನಾವಣಾ ಆಯೋಗ ಇಂದು 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಯಾವಾಗ ಚುನಾವಣೆ..?
- ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ
- ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ
- ಮೇ 7 ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ
- ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ
- ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ
ದೇಶದಲ್ಲಿ ಯಾವ್ಯಾವ ಹಂತದಲ್ಲಿ ಚುನಾವಣೆ..?
- ಮೊದಲ ಹಂತದ ಚುನಾವಣೆ ಏಪ್ರಿಲ್ 19ಕ್ಕೆ ನಡೆಯಲಿದೆ
- ಎರಡನೇ ಹಂತದ ಚುನಾವಣೆ ಏಪ್ರಿಲ್ 26ಕ್ಕೆ ನಡೆಯಲಿದೆ
- ಮೂರನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿದೆ
- ನಾಲ್ಕನೇ ಹಂತದ ಚುನಾವಣೆ ಮೇ 13 ರಂದು ನಡೆಯಲಿದೆ
- ಐದನೇ ಹಂತದ ಚುನಾವಣೆ ಮೇ 20 ರಂದು ನಡೆಯಲಿದೆ
- ಆರನೇ ಹಂತದ ಚುನಾವಣೆ ಮೇ 25 ರಂದು ನಡೆಯಲಿದೆ
- ಏಳನೇ ಹಂತದ ಚುನಾವಣೆ ಜೂನ್ 1 ರಂದು ನಡೆಯಲಿದೆ
ರಾಜ್ಯದ 28 ಲೋಕಸಭೆ ಕ್ಷೇತ್ರಗಳು
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ (ಕೇನರಾ), ದಾವಣಗೆರೆ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ)
ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿಯಲ್ಲಿ ಚುನಾವಣೆಯ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಒಟ್ಟು 97 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹತೆಯನ್ನು ಹೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇಂದು ದೆಹಲಿಯ ವಿಜ್ಞಾನಭವನದಲ್ಲಿ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ನಾವು ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ : ಕೋಟಿ ಕೋಟಿ ತೆರಿಗೆ ಬಾಕಿ – ಮಂತ್ರಿಮಾಲ್ಗೆ ಮತ್ತೆ ಬೀಗ ಜಡಿದು ಶಾಕ್ ಕೊಟ್ಟ ಬಿಬಿಎಂಪಿ..!