ಬೆಂಗಳೂರು : ಕರ್ನಾಟಕದ ಮೂರು ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಿನ್ನೆ ಬಿಜೆಪಿ ಜೊತೆಗಿನ ಸಮನ್ವಯ ಸಭೆ ಬಳಿಕ ಜೆಡಿಎಸ್ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಮಂಡ್ಯದಿಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಇನ್ನು ಕೋಲಾರದಲ್ಲಿ ಮಲ್ಲೇಶ್ ಬಾಬುಗೆ ಟಿಕೆಟ್ ನೀಡಲಾಗಿದೆ.
ಇತ್ತೀಚೆಗೆ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಪಟ್ಟಿ ಘೋಷಣೆ ಮುಂದೂಡಿಕೆಯಾಗಿತ್ತು. ಇದೀಗ ಮಾಜಿ ಸಿಎಂ ಎಚ್‌ಡಿಕೆ ಅವರು, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕರ್ತರ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ : ರಾಜ್ಯದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ – ಬಣ ಬಡಿದಾಟದಿಂದ ಕೋಲಾರ ಟಿಕೆಟ್ ಇನ್ನೂ ಸಸ್ಪೆನ್ಸ್..!
Post Views: 131