ಬೆಂಗಳೂರು : ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ 15 ಕ್ಷೇತ್ರಗಳಿಗೆ ಕೆಲ ನಾಯಕರ ಹೆಸರನ್ನು ಸೂಚಿಸಿ ಪಟ್ಟಿಯನ್ನು ಸಿದ್ದಪಡಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದು, ಸರ್ವೇ ಕಾರ್ಯ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಅಂತಿಮ ಘೋಷಣೆ ಮಾಡಲಿದೆ ಎಂದು ಹೇಳಲಾಗಿದೆ. ರಾಜ್ಯ ನಾಯಕರು ಶಿಫಾರಸು ಮಾಡಿ ಹೈಕಮಾಂಡ್ ಕೂಡ ಬಹುತೇಕ ಒಪ್ಪಿದೆ ಎನ್ನಲಾದ ಈ ಪಟ್ಟಿಯಲ್ಲಿ ನಾಲ್ಕು ಮಂದಿ ಸಚಿವರಾದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೆಸರು ಕೋಲಾರಕ್ಕೆ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಚಾಮರಾಜನಗರಕ್ಕೆ, ಕ್ರೀಡಾ ಸಚಿವ ಬಿ. ನಾಗೇಂದ್ರ ಹೆಸರು ಬಳ್ಳಾರಿಗೆ ಮತ್ತು ಸಮಾಜ ಕಲ್ಯಾಣ ಸತೀಶ್ ಜಾರಕಿಹೊಳಿ ಅವರ ಹೆಸರು ಬೆಳಗಾವಿ ಕ್ಷೇತ್ರಕ್ಕೆ ಪಟ್ಟಿಯಲ್ಲಿ ಸೂಚಿತವಾಗಿದೆ.
ರಾಜ್ಯ ಕಾಂಗ್ರೆಸ್ 15 ಕ್ಷೇತ್ರಗಳಿಗೆ ಸಿದ್ಧಪಡಿಸಿರುವ ನಾಯಕರ ಪಟ್ಟಿ ಹೀಗಿದೆ..!
- ಕೋಲಾರ – ಕೆ.ಎಚ್.ಮುನಿಯಪ್ಪ
- ಚಾಮರಾಜನಗರ – ಡಾ.ಎಚ್.ಸಿ.ಮಹದೇವಪ್ಪ
- ಬಳ್ಳಾರಿ – ನಾಗೇಂದ್ರ
- ಬೆಳಗಾವಿ – ಸತೀಶ್ ಜಾರಕಿಹೊಳಿ
- ತುಮಕೂರು- ಮುದ್ದಹನುಮೇಗೌಡ
- ಚಿತ್ರದುರ್ಗ -ಬಿ.ಎನ್. ಚಂದ್ರಪ್ಪ
- ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್
- ಹಾಸನ – ಶ್ರೇಯಸ್ ಪಟೇಲ್
- ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
- ಚಿಕ್ಕೋಡಿ – ರಮೇಶ್ ಕತ್ತಿ
- ಉಡುಪಿ , ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
- ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
- ಬೀದರ್ – ರಾಜಶೇಖರ್ ಪಾಟೀಲ್ ಹುಮ್ನಾಬಾದ್
- ಬಿಜಾಪುರ – ರಾಜು ಅಲಗೂರು
- ರಾಯಚೂರು – ಕುಮಾರನಾಯ್ಕ್
ಇದನ್ನೂ ಓದಿ : ‘ಕಾಂಗ್ರೆಸ್ ಲೋಕಸಭಾ ಎಲೆಕ್ಷನ್ನಲ್ಲಿ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ’ – ಪ್ರಧಾನಿ ಮೋದಿ ವ್ಯಂಗ್ಯ..!