ತುಮಕೂರು : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಬಿಗ್ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ.
ಇಂದು ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಬಾಗಿಲು ತಟ್ಟಿದ್ದಾರೆ. ಮನೆಯಲ್ಲಿ ಇನ್ನು ಹಾಸಿಗೆಯಿಂದ ಎದ್ದೆಳೋ ಮೊದಲೇ ಅಧಿಕಾರಿಗಳು ಎಂಟ್ರಿಯಾಗಿದ್ದಾರೆ. ತುಮಕೂರಿನಲ್ಲಿ KIADB ಅಪರ ನಿರ್ದೇಶಕ ಮುದ್ದುಕುಮಾರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದಾರೆ. ಸಿ.ಟಿ ಮುದ್ದುಕುಮಾರ್ ಅವರು ಬೆಂಗಳೂರು ಖನಿಜಭವನದ KIADB ಅಪರ ನಿರ್ದೇಶಕರಾಗಿದ್ದಾರೆ.
ಮುದ್ದುಕುಮಾರ್ ಮನೆ, ಕಚೇರಿ ಸೇರಿದಂತೆ 7 ಕಡೆಗಳಲ್ಲಿ ಲೋಕಾ ರೇಡ್ ನಡೆಸಿದೆ. ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ವಾಸದ ಮನೆ, ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಅಷ್ಟೆ ಅಲ್ಲದೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆಯಲ್ಲೂ ಹುಡುಕಾಟ ನಡೆಸುತ್ತಿದ್ದಾರೆ.
ಚಿಕ್ಕನಾಯಕನಹಳ್ಳಿಯ ಶೆಟ್ಟಿಕೆರೆ ಹೋಬಳಿ ರಂಗನಾಥಪುರದ ಫಾರಂಹೌಸ್, ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿ, ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ ಸ್ಥಾಪಿಸಿರುವ ಮುದ್ದುಕುಮಾರ್ ಮೇಲೆ ತುಮಕೂರು ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಲೋಕಾಯುಕ್ತ DySP ಬಿ.ಉಮಾಶಂಕರ್, ರಾಮಕೃಷ್ಣಯ್ಯ ತಂಡದಿಂದ ರೇಡ್ ಆಗಿದೆ. 30ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿಯಿಂದ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಯುತ್ತಿದ್ದು, ಬೆಂಗಳೂರಿನ ನಾಗರಭಾವಿಯಲ್ಲಿರುವ ಮನೆಯಲ್ಲೂ ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಹಾವೇರಿಯಲ್ಲಿ ಹೃದಯ ವಿದ್ರಾವಕ ಘಟನೆ – ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಅವಳಿ ಮಕ್ಕಳು, ಓರ್ವ ಮಹಿಳೆ ಸಾವು..!