Download Our App

Follow us

Home » ಅಪರಾಧ » ಲೋಕಸಭೆ ಚುನಾವಣೆ 2024 : ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ರೂ. ವಶಕ್ಕೆ..!

ಲೋಕಸಭೆ ಚುನಾವಣೆ 2024 : ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 13 ಲಕ್ಷ ರೂ. ವಶಕ್ಕೆ..!

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಇನ್ನು ಹಣ, ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು ಸೆಳೆಯುವುದಕ್ಕೆ ಬ್ರೇಕ್​​ ಬೀಳುತ್ತದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಿಂದಾಗಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ.

ಅದರಂತೆ ಬೆಂಗಳೂರಿನ ಅಶೋಕ್ ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಚುನಾವಣಾ ಚೆಕ್ ಪೋಸ್ಟ್ ಪರಿಶೀಲನೆ ವೇಳೆ ಅಶೋಕ್ ನಗರದಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. ದಾಖಲೆಯಿಲ್ಲದೆ KA53 MH0123 ಎಂಬ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು, ಈ ವೇಳೆ ಪೊಲೀಸರು ದಾಖಲಾತಿ ಪರಿಶೀಲನೆ ಮಾಡಿ ಹದಿಮೂರು ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ.

ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹದಿಮೂರು ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದು, ಈ ಪ್ರಕರಣ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ : ಕನ್ನಡ ಸೆಲೆಬ್ರಿಟಿಗಳ “ಮಾರ್ಯಾದೆ ಪ್ರಶ್ನೆ”ಗೆ ಉತ್ತರ ಕೊಟ್ಟ ಆರ್.ಜೆ ಪ್ರದೀಪ್..!

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here

11:17