Download Our App

Follow us

Home » ಅಪರಾಧ » ಲೋಕಸಭೆ ಚುನಾವಣೆ : ಚಿಕ್ಕಬಳ್ಳಾಪುರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ವಶಕ್ಕೆ..!

ಲೋಕಸಭೆ ಚುನಾವಣೆ : ಚಿಕ್ಕಬಳ್ಳಾಪುರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ವಶಕ್ಕೆ..!

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಇದೀಗ ರಾಜ್ಯದಲ್ಲಿ ಝಣ ಝಣ ಕಾಂಚಾಣದ ಸದ್ದು ಜೋರಾಗಿದೆ. ದಾಖಲೆಯಿಲ್ಲದೇ ಕೋಟಿ ಕೋಟಿ ಹಣವನ್ನ ಸಾಗಿಸುತ್ತಿರುವುದು ಹೆಚ್ಚಾಗಿದೆ. ಹಾಗಾಗಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಹಗಲು-ರಾತ್ರಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಅದರಂತೆಯೇ ಇದೀಗ ಚಿಕ್ಕಬಳ್ಳಾಪುರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸುಲ್ತಾನ್ ಪೇಟೆ ಬಳಿ ಇರುವ ಚೆಕ್​​ಪೋಸ್ಟ್​ನಲ್ಲಿ ಹಣ ವಶಕ್ಕೆ ಪಡೆಯಲಾಗಿದೆ. 5 ಲಕ್ಷ ಹಣವನ್ನ ಇನೋವಾ ಕಾರ್​​ನಲ್ಲಿ ಸಾಗಣೆ ಮಾಡುತ್ತಿದ್ದರು. ಈ ವೇಳೆ ಸಂಚಾರಿ ಠಾಣೆಯ PSI ಮಂಜುಳಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಈ ಹಣ ಚಿಕ್ಕಬಳ್ಳಾಪುರ ನಗರದ ಗಿರೀಶ್ ಎಂಬುವರಿಗೆ ಸೇರಿದ್ದಾಗಿದ್ದು, ದಾಖಲೆಯಿಲ್ಲದೆ ಸಾಗಿಸುತ್ತಿದ್ದ 5 ಲಕ್ಷ ಹಣ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಎಲೆಕ್ಷನ್​​​ ಹೊತ್ತಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ರಿಂದ ಟೆಂಪಲ್ ರನ್..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here