Download Our App

Follow us

Home » ರಾಜಕೀಯ » ಲೋಕಸಭೆ ಚುನಾವಣೆ : ಮಂಡ್ಯದಿಂದಲೇ ಹೆಚ್.​ಡಿ ಕುಮಾರಸ್ವಾಮಿ ಸ್ಪರ್ಧೆ..!

ಲೋಕಸಭೆ ಚುನಾವಣೆ : ಮಂಡ್ಯದಿಂದಲೇ ಹೆಚ್.​ಡಿ ಕುಮಾರಸ್ವಾಮಿ ಸ್ಪರ್ಧೆ..!

ಮಂಡ್ಯ : ಲೋಕಸಭೆ ಚುನಾವಣಾ ಅಖಾಡದಲ್ಲಿ ಮಂಡ್ಯ ಕ್ಷೇತ್ರ ತೀವ್ರ ಜಿದ್ದಾಜಿದ್ದಿಯ ಕಣವಾಗಿದೆ. ಈ ಬಾರಿಯೂ ಮಂಡ್ಯ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡುವ ಸಾಧ್ಯತೆಗಳಿವೆ. ಬಿಜೆಪಿ ಜೊತೆ ಸೀಟು ಹಂಚಿಕೆ ಹಗ್ಗಜಗ್ಗಾಟದಲ್ಲಿ ಇದೀಗ ಜೆಡಿಎಸ್‌‌ ಜಯಶಾಲಿಯಾಗಿದ್ದು, ಬಿಜೆಪಿ ಹೈಕಮಾಂಡ್‌ ಮಂಡ್ಯ ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಟ್ಟಿದೆ.

ಹೆಚ್.​ಡಿ ಕುಮಾರಸ್ವಾಮಿಯವರು ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ತೀವ್ರ ವಿರೋಧದ ನಡುವೆಯೂ ಮಂಡ್ಯದಿಂದ ಕಣಕ್ಕಿಳಿಯಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಮಂಡ್ಯ, ಕೋಲಾರ, ಹಾಸನದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುವುದಾಗಿ ಕೋರ್​ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದೆ. ಕೋಲಾರದಿಂದ ಬಿಜೆಪಿ MP ಮುನಿಸ್ವಾಮಿಗೆ ಜೆಡಿಎಸ್ ಟಿಕೆಟ್​ ಸಿಗುವ ಸಾಧ್ಯತೆಯಿದೆ.

ಕೋರ್​ ಕಮಿಟಿ ಸಭೆ ಹೆಚ್.​ಡಿ ಕುಮಾರಸ್ವಾಮಿ ಮಾತನಾಡಿ, ಮಂಡ್ಯ ಜಿಲ್ಲೆಯ ಜನರು ನನ್ನನ್ನು ಬಯಸಿದ್ದಾರೆಂದು ಹೇಳಿದ್ದಾರೆ. ಹಾಗೆಯೇ ನಾನಾ ಕಾರಣಗಳನ್ನ ನೀಡಿ ಮಂಡ್ಯ ಸ್ಪರ್ಧೆ ಬಗ್ಗೆ ಹೆಚ್​ಡಿಕೆ ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ಮುನಿಸ್ವಾಮಿ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಹೆಚ್​ಡಿಕೆ ಸುಳಿವು ನೀಡಿದ್ದಾರೆ. ಜೆಡಿಎಸ್​ ಸಿಂಬಲ್​ನಲ್ಲೇ ಮುನಿಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. MP ಮುನಿಸ್ವಾಮಿಗೆ ಜೆಡಿಎಸ್​ ಟಿಕೆಟ್ ಬಗ್ಗೆ ಇಂದು ಸಂಜೆ 5 ಗಂಟೆಗೆ ಅಧಿಕೃತವಾಗಿ ಘೋಷಣೆಯಾಗಲಿದೆ.

ಇದನ್ನೂ ಓದಿ : ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here