ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮುಡಾ ಕೇಸ್ ಬೆನ್ನಲ್ಲೇ ಡಿಕೆಶಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸದ್ದು ಮಾಡುತ್ತಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆಶಿಗೆ ನೋಟಿಸ್ ನೀಡಿದ್ದಾರೆ.
CBIನಲ್ಲಿ ದಾಖಲಾಗಿದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದು ಲೋಕಾಯುಕ್ತ ತನಿಖೆಗೆ ವಹಿಸಿತ್ತು. ಇದೀಗ ತಕ್ಷಣ ವಿಚಾರಣೆಗೆ ಹಾಜರಾಗಲು ಡಿಕೆಶಿಗೆ ನೋಟಿಸ್ ನೀಡಲಾಗಿದ್ದು, ಸಂಪುಟ ಸಭೆ ಮುಗಿದ ನಂತರ ಡಿಕೆ ಶಿವಕುಮಾರ್ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಲಿದ್ದಾರೆ.
ಲೋಕಾಯುಕ್ತದಿಂದ ಈಗ ನೋಟಿಸ್ ಯಾಕೆ? ಇದೇ ವರ್ಷದ ಫೆಬ್ರವರಿಯಲ್ಲಿ ಡಿಕೆಶಿಯವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದ ಈ ಹಿಂದಿನ ರಾಜ್ಯ ಸರ್ಕಾರದ ನಿರ್ಧಾರವನ್ನು ಈಗಿನ ಸಿದ್ದರಾಮಯ್ಯನವರ ಸರ್ಕಾರ ಹಿಂಪಡೆದಿತ್ತು. ಸಿಬಿಐನಿಂದ ಹಿಂಪಡೆಯಲಾದ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಲಾಗಿತ್ತು. ಅದಾದ ನಂತರ, ಲೋಕಾಯುಕ್ತ ಸಂಸ್ಥೆಯು ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಆ ಹಿನ್ನೆಲೆಯಲ್ಲಿ ಈಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಇದನ್ನೂ ಓದಿ : ಸಿಗರೇಟ್ ಹಚ್ಚಿ ಚೆಲ್ಲಿದ್ದ ಪೆಟ್ರೋಲ್ ಮೇಲೆ ಬೆಂಕಿ ಕಡ್ಡಿ ಎಸೆದ ಭೂಪ – ಅಲ್ಲಿದ್ದವರು ಬಚಾವ್ ಆಗಿದ್ದೇ ರೋಚಕ..!