ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಅಲ್ಲದೆ ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ಡೈರಕ್ಟರ್ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್ ಮನೆ ಮೇಲೆ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಪ್ಲಾಟ್ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಬಳಿ ಇರೋ ಪ್ಲಾಟ್ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರಿಗೆ ಸಂಬಂಧಿಸಿದಂತೆ ಮಂಗಳೂರು, ಮೈಸೂರು, ಬೆಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಆಸ್ತಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಮಂಡ್ಯ ಕಾವೇರಿ ನೀರಾವರಿ ನಿಗಮ MD ಮಹೇಶ್ಗೆ ಸಂಬಂಧಿಸಿದ 6 ಸ್ಥಳಗಳಲ್ಲಿ ಲೋಕಾ ರೇಡ್ ಮಾಡಿದೆ. ಮಂಡ್ಯದ ಮಳವಳ್ಳಿಯಲ್ಲಿರುವ ಮನೆಯಲ್ಲಿ ಮಂಡ್ಯ ಲೋಕಾ SP ಸುರೇಶ್ ಬಾಬು ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕನಕಪುರ ರಸ್ತೆಯಲ್ಲಿರುವ ಟೌನ್ ಪ್ಲಾನಿಂಗ್ ಡೈರೆಕ್ಟರ್ N.K.ತಿಪ್ಪೇಸ್ವಾಮಿಗೆ ಅವರ ಮನೆಯಲ್ಲಿ ಶೋಧ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ SP ಮೋಹನ್ಗೂ ಲೋಕಾ ಶಾಕ್ ಎದುರಾಗಿದ್ದು, ಅಬಕಾರಿ ಜಂಟಿ ಕಮಿಷನರ್ ಕಚೇರಿಯ SP ಮೋಹನ್ ಅವರ ಬೆಂಗಳೂರಿನ ಬನಶಂಕರಿ ಮನೆಯಲ್ಲಿ ತಪಾಸಣೆ ನಡೆಸ್ತಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಟಾಸ್ಕ್ ವೇಳೆ ಎತ್ತರದಿಂದ ಬಿದ್ದ ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿ..!