Download Our App

Follow us

Home » ಮೆಟ್ರೋ » ಲೋಕಸಭಾ ಚುನಾವಣೆ 2024 : ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ..!

ಲೋಕಸಭಾ ಚುನಾವಣೆ 2024 : ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ..!

ಬೆಂಗಳೂರು : 2024ರ ಲೋಕಸಭಾ ಚುನಾವಣೆಯ ಮತದಾನದ ದಿನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಒಟ್ಟು 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲಿಯೂ ನಾಳೆಯೇ ಮತದಾನ ನಡೆಯಲಿದೆ.

ಹೀಗಾಗಿ ಮತದಾರರಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ಸಂಸ್ಥೆ ವಿಶೇಷ ಸಿದ್ದತೆ ಮಾಡಿಕೊಂಡಿದೆ. ನಾಳೆ ನಗರದಲ್ಲಿ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಮೆಟ್ರೋ ಪ್ರಯಾಣದ ಸೇವೆ ಒದಗಿಸಲು ಬಿಎಂಆರ್‌ಸಿಎಲ್‌ ಮುಂದಾಗಿದೆ.

ಬೆಂಗಳೂರು ನಗರದಾದ್ಯಂತ ಸಂಚರಿಸುವ ಪ್ರಯಾಣಿಕರಿಗೆ ಚುನಾವಣಾ ಸಿಬ್ಬಂದಿಗಳಿಗೆ ಅಗತ್ಯ ಸೇವೆ ನೀಡುವ ಕುರಿತು ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಹಾಗೂ ಮತದಾನದ ದಿನ ಪ್ರಯಾಣಿಕರ ಅನುಕೂಲವಾಗಬೇಕೆಂದು ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.

ಏಪ್ರಿಲ್ 26ರಂದು ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್‌ (ಕಾಡುಗೋಡಿ) ನಿಲ್ದಾಣದಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55ರವರೆಗೂ ವಿಸ್ತರಿಸಲಾಗಿದೆ. ಇನ್ನು ನಾಡಪ್ರಭು ಕೇಂಪೇಗೌಡ ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೂ ಕೊನೆಯ ರೈಲು ಮಧ್ಯರಾತ್ರಿ 00.35ರವರೆಗೂ ಹೊರಡಲಿದೆ. ಮತದಾನ ದಿನ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಹೆಚ್ಚಾಗಿ ಬಳಸಿಕೊಳ್ಳುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದೆ.

ಇದನ್ನೂ ಓದಿ : ಬೆಂಗಳೂರು : ಬಾಡಿಗೆ ಮನೆ ನೋಡಲು ಹೋದವರನ್ನ ಕೂಡಿ ಹಾಕಿ ಹ*ಲ್ಲೆ – ಏಳು ಮಂದಿ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here