ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರು ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಇಂದು 4ನೇ ದಿನಕ್ಕೆ ಕಾಲಿಟ್ಟಿದೆ.
ದೋಸ್ತಿಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ನಿನ್ನ ಕೆಂಗಲ್ನಿಂದ ಶುರುವಾಗಿ ಮದ್ದೂರಿನ ನಿಡಘಟ್ಟದಲ್ಲಿ ಅಂತ್ಯವಾಗಿತ್ತು. 4ನೇ ದಿನವಾದ ಇಂದು ಮತ್ತೆ ನಿಡಘಟ್ಟದಿಂದ ಆರಂಭವಾಗಲಿರೋ ಪಾದಯಾತ್ರೆ ಮಂಡ್ಯ ತಲುಪಲಿದೆ. ಮದ್ದೂರಿನಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆ ಇರಲಿದೆ.
ಕಾಂಗ್ರೆಸ್ ಸರ್ಕಾರ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪಾದಯಾತ್ರೆ ಉದ್ದಕ್ಕೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇತರ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಮುಡಾ ಪ್ರಕರಣವನ್ನು CBI ತನಿಖೆಗೆ ವಹಿಸಿ ಸಿಎಂ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ಧಾರೆ.
ಇದನ್ನೂ ಓದಿ : ಚಿತ್ರದುರ್ಗ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ..!