Download Our App

Follow us

Home » ರಾಷ್ಟ್ರೀಯ » ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಭಾರೀ ಅಗ್ನಿ ದುರಂತ – 7 ನವಜಾತ ಶಿಶುಗಳು ಸಾ*ವು..!

ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಭಾರೀ ಅಗ್ನಿ ದುರಂತ – 7 ನವಜಾತ ಶಿಶುಗಳು ಸಾ*ವು..!

ನವದೆಹಲಿ : ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ 7 ನವಜಾತ ಶಿಶುಗಳು ಸಾವನ್ನಪ್ಪಿವೆ. 12 ನವಜಾತ ಶಿಶುಗಳ ರಕ್ಷಣೆ ಮಾಡಲಾಗಿದೆ.

ರಕ್ಷಿಸಿದ ನವಜಾತ ಶಿಶುಗಳಲ್ಲಿ ಹಲವು ಶಿಶುಗಳ ಸ್ಥಿತಿ ಗಂಭೀರವಾಗಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ನಿನ್ನೆ ರಾತ್ರಿ 11:32ಕ್ಕೆ ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂತ್ತು. ಇದೀಗ 16 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಬಂದು ಭಾನುವಾರ ಮುಂಜಾನೆಯವರೆಗೂ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಮಕ್ಕಳನ್ನು ಪೂರ್ವ ದೆಹಲಿಯ NICUಗೆ ದಾಖಲಿಸಲಾಗಿದೆ.

ಬೆಂಕಿ ಅನಾಹುತಕ್ಕೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಆಸ್ಪತ್ರೆಯೊಳಗೆ ಇಡಲಾಗಿದ್ದ ಹಲವಾರು ಆಮ್ಲಜನಕ ಸಿಲಿಂಡರ್‌ಗಳೂ ಬೆಂಕಿಗೆ ಆಹುತಿಯಾಗಿವೆ. ಒಂದು ಆಸ್ಪತ್ರೆ ಕಟ್ಟಡ ಮತ್ತು ಎರಡು ಮಹಡಿಗಳು ವಸತಿ ಕಟ್ಟಡಗಳು ಬೆಂಕಿಯಿಂದ ಹಾನಿಗೊಳಗಾಗಿವೆ. ಸಿಲಿಂಡರ್​​​​ ಸ್ಫೋಟದಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಮಗು ಸೇರಿ 6 ಮಂದಿ ಸ್ಥಳದಲ್ಲೇ ದುರ್ಮರಣ..!

 

 

 

 

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here