Download Our App

Follow us

Home » ಸಿನಿಮಾ » ಕಟ್ಟಡದಿಂದ ಜಿಗಿದು ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ..!

ಕಟ್ಟಡದಿಂದ ಜಿಗಿದು ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ..!

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಅವರು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಮನೆಯ ಟೆರೇಸ್‌ ಮೇಲೆ ತೆರಳಿ ಕೆಳಗೆ ಜಂಪ್ ಮಾಡಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮುಂಬೈ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸದ್ಯ ಪೊಲೀಸರು ತನಿಖೆ ಮುಂದುವರೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅನಿಲ್‌ ಅರೋರಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಅನಿಲ್ ಅರೋರಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಲೈಕಾ ಅರೋರಾರ ಮಾಜಿ ಪತಿ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್, ಮಲೈಕಾರ ಬಾಂದ್ರಾದ ಮನೆಗೆ ಆಗಮಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ : ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ – ವಿಡಿಯೋ ವೈರಲ್..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here