Download Our App

Follow us

Home » ಸಿನಿಮಾ » ಕನಸಿನ ರಾಣಿ ಮಾಲಾಶ್ರೀ ನಟನೆಯ ಕನ್ನಡದ “ಮಾರಕಾಸ್ತ್ರ” ಚಿತ್ರ ತೆಲುಗಿನಲ್ಲೂ ರಿಲೀಸ್..!

ಕನಸಿನ ರಾಣಿ ಮಾಲಾಶ್ರೀ ನಟನೆಯ ಕನ್ನಡದ “ಮಾರಕಾಸ್ತ್ರ” ಚಿತ್ರ ತೆಲುಗಿನಲ್ಲೂ ರಿಲೀಸ್..!

ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದ “ಮಾರಕಾಸ್ತ್ರ” ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ ನಿರ್ಮಾಣವಾಗಿದ್ದು “ಮಾರಣಾಯುಧಂ” ಎಂದು ಹೆಸರಿಡಲಾಗಿದೆ. ಆಂದ್ರ ಹಾಗು ತೆಲಂಗಾಣದಲ್ಲಿ ಈ ಚಿತ್ರ ಈಗಾಗಲೇ ಬಿಡುಗಡೆಯಾಗಿದ್ದು, ಅಲ್ಲಿನ ಜನರ ಮನ ಗೆದ್ದಿದೆ. ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಈ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.‌ ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ “ಮಾರಕಾಸ್ತ್ರ” ಚಿತ್ರವನ್ನು ಕಳೆದವರ್ಷ ಬಿಡುಗಡೆ ಮಾಡಿದ್ದೆವು. ಆ ಸಮಯದಲ್ಲಿ ಭಾರತ – ಪಾಕ್ ಮ್ಯಾಚ್, ಹಬ್ಬಗಳು ಬಂದವು. ಹಾಗಾಗಿ ಅಷ್ಟು ಜನ ನಮ್ಮ ಸಿನಿಮಾ‌ ನೋಡಲು ಆಗಲಿಲ್ಲ. ಆದರೆ ಚಿತ್ರ ನೋಡಿದ ತೆಲುಗು ವಿತರಕರಾದ ವೆಂಕಟೇಶ್ ರಾವ್ ಅವರು ಈ ಚಿತ್ರವನ್ನು ತೆಲುಗಿನಲ್ಲಿ ನಿರ್ಮಾಣ ಮಾಡಿ ಎಂದರು. “ಮಾರಕಾಸ್ತ್ರ” ಈಗ “ಮಾರಣಾಯುಧಂ” ಎಂಬ ಹೆಸರಿನಿಂದ ಇದೇ ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ. ಶನಿವಾರ( 27) ದಂದು ಪೌರ ಕಾರ್ಮಿಕರು ಸೇರಿದಂತೆ ಅನೇಕ ಶ್ರಮಿಕ ವರ್ಗದವರಿಗೆ ಒಂದು ಉಚಿತ ಪ್ರದರ್ಶನದ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ನಿರ್ಮಾಪಕ ನಟರಾಜ್ ತಿಳಿಸಿದ್ದಾರೆ.

“ಮಾರಕಾಸ್ತ್ರ” ಚಿತ್ರವನ್ನು ಬಿಡುಗಡೆ ಮಾಡಿದಾಗ ಚಿತ್ರದ ಅವಧಿ ಸ್ವಲ್ಪ ಹೆಚ್ಚಿದೆ ಎಂದಿದ್ದರು ಈಗ 26 ನಿಮಿಷ ಕಡಿಮೆ ಮಾಡಿದ್ದೇವೆ. ಮಾಲಾಶ್ರೀ, ಆನಂದ್ ಆರ್ಯ, ಹರ್ಷಿಕಾ ಪೂಣಚ್ಛ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ ಎಂದು ನಿರ್ದೇಶಕ ಗುರುಮೂರ್ತಿ ಸುನಾಮಿ ತಿಳಿಸಿದರು.

ನಾನು ಮೊದಲು “ಮಾರಕಾಸ್ತ್ರ” ಚಿತ್ರದಲ್ಲಿ ನಟಿಸಲು ಒಪ್ಪಿರಲಿಲ್ಲ. ಆನಂತರ ನಿರ್ದೇಶಕರು ಕಥೆ ಹೇಳಿದ ರೀತಿ ಇಷ್ಟವಾಯಿತು. ಅದರಲ್ಲೂ ನಿರ್ದೇಶಕರಿಗೆ ಕಾಲಿನ ಸಮಸ್ಯೆಯಿದೆ. ಅಂತಹುದರಲ್ಲೂ ಅವರಿಗಿರುವ ಸಿನಿಮಾ ಪ್ರೀತಿ ಕಂಡು ಖುಷಿಯಾಯಿತು. ತೆಲುಗಿನ ಜನರು ನನ್ನ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಇದೇ ಶುಕ್ರವಾರ ಕರ್ನಾಟಕದಲ್ಲೂ ಬಿಡುಗಡೆಯಾಗಲಿದೆ. ಎಲ್ಲರೂ ಚಿತ್ರ ನೋಡಿ ಎಂದು ನಟಿ ಮಾಲಾಶ್ರೀ ಹೇಳಿದ್ದಾರೆ.

ಚಿತ್ರದ ವಿತರಕ ಯಾದವ್, ಕಾರ್ಯಕಾರಿ ನಿರ್ಮಾಪಕ ವೆಂಕಟೇಶ್ ರಾವ್, ನಾಯಕ ಆನಂದ್ ಆರ್ಯ, ರವಿಚೇತನ್ , ಶಶಿಧರ್, ಮಂಜುನಾಥ್, ಮಂಜುಳಾ ರೆಡ್ಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಬಳ್ಳಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 23 ಲಕ್ಷ ನಗದು, 450 ಗ್ರಾಂ ಚಿನ್ನ, 13 ಕೆಜಿ ಬೆಳ್ಳಿ ಸೀಜ್..!

Leave a Comment

RELATED LATEST NEWS

Top Headlines

ರೇಣುಕಾಸ್ವಾಮಿ ಕೇಸ್​ನಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲಿ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ..!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಜಯೇಂದ್ರ

Live Cricket

Add Your Heading Text Here