Download Our App

Follow us

Home » ಸಿನಿಮಾ » ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು – ಅಭಿಮಾನಿಗಳಿಗೆ ಹೆಚ್ಚಿದ ಆತಂಕ..!

ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು – ಅಭಿಮಾನಿಗಳಿಗೆ ಹೆಚ್ಚಿದ ಆತಂಕ..!

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ​ಲಾಲ್ ಅವರನ್ನು ದಿಢೀರನೆ  ಕೊಚ್ಚಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ನಟ ಮೋಹನ್ ಲಾಲ್​​ಗೆ ತಜ್ಞ ವೈದ್ಯರಿಂದ ಚಿಕಿತ್ಸೆ ನಡೆಯುತ್ತಿದೆ.

ಮೋಹನ್​ಲಾಲ್ ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದ್ದು, 64 ವರ್ಷದ ಮೋಹನ್​ಲಾಲ್ ಅವರಿಗೆ ತೀವ್ರತರವಾದ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ಇತರೆ ರೋಗ ಲಕ್ಷಣಗಳು ಕಂಡುಬಂದ ಹಿನ್ನೆಲೆ ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕಕ್ಕೂ ಮೋಹನ್ ಲಾಲ್​​ಗೂ ಅವಿನಾಭಾವ ಸಂಬಂಧವಿದೆ. ಮೋಹನ್ ಲಾಲ್​​ ಕನ್ನಡ, ಹಿಂದಿ, ತಮಿಳು, ಮಲಯಾಳಂ, ಹೀಗೆ ಹಲವಾರು ಭಾಷೆಗಳಲ್ಲಿ ಅಭಿನಹಿಸಿ ಚಿತ್ರರಂಗದಲ್ಲಿ ಗುರುತಿಸಿ ಕೊಂಡಿದ್ದಾರೆ. ಅಮಿತಾಭ್ ಬಚ್ಚನ್, ರಾಜಕುಮಾರ್, ರಜನಿ ಕಾಂತ್, ಹೀಗೆ ಹಲವು ಚಿತ್ರರಂಗದ ನಟರ ಜೊತೆಯಲ್ಲಿ ಕೆಲಸ ಮಾಡಿದ್ದಾರೆ. 300 ಕ್ಕೂ ಹೆಚ್ಛು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿರುವುದು ಮಾತ್ರವಲ್ಲದೇ, ಇವರು ನಾಯಕನ ಜೊತೆ ನಿರ್ದೇಶಕ, ನಿರ್ಮಾಪಕರಾಗಿ ಅನೇಕ ಚಿತ್ರಗಳನ್ನೂ ನಿರ್ಮಿಸಿ ಹೆಸರು ಗಳಿಸಿದ್ದಾರೆ.

ಇದನ್ನೂ ಓದಿ : ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್​ಗೆ ರಿಟ್ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..!

Leave a Comment

DG Ad

RELATED LATEST NEWS

Top Headlines

ಶಾಲಾ ಮಕ್ಕಳ ಕ್ಷೀರ ಭಾಗ್ಯಕ್ಕೆ ಕನ್ನ ಹಾಕಿದ ಹೆಡ್​​ ಮಾಸ್ಟರ್ – ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು..!

ಗುಲ್ಬರ್ಗ : ಅಕ್ಷರ ದಾಸೋಹ ಯೋಜನೆಯ ಕ್ಷೀರ ಭಾಗ್ಯಕ್ಕೆ ಹೆಡ್​​ ಮಾಸ್ಟರರೇ ಕನ್ನ ಹಾಕಿರುವ ಘಟನೆಯೊಂದು ನಡೆದಿದೆ. ಗುಲ್ಬರ್ಗದ ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರ ಗ್ರಾಮದ ಸರ್ಕಾರಿ

Live Cricket

Add Your Heading Text Here