ಬೆಂಗಳೂರು : ಪಕ್ಕದ ಮನೆಯಲ್ಲಿನ ಹಣ ಮತ್ತು ಚಿನ್ನವನ್ನು ಕಳ್ಳತನ ಮಾಡಿ, ನೇರವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋದ ಆರೋಪಿಗಳು, ದೇವಸ್ಥಾನದ ಹುಂಡಿಯಲ್ಲಿ ಹಣ ಹಾಕಿ ಪರಾರಿಯಾಗಿದ್ದಾರೆ. ಇತ್ತ ಹಣ ಕಳೆದುಕೊಂಡ ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರು ಕೆಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಕಲಿ ಕೀ ಬಳಸಿ ಪಕ್ಕದ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಕಳ್ಳರನ್ನು ಇದೀಗ ಜೆ.ಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್, ಆನಂದ್, ನಾನಿ ಬಂಧಿತ ಆರೋಪಿಗಳು.
ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರ ಮನೆಯ ಪಕ್ಕದಲ್ಲೇ ಆರೋಪಿಗಳು ಕಳೆದ 15 ವರ್ಷಗಳಿಂದ ವಾಸವಾಗಿದ್ದರು. ಆರೋಪಿಗಳು ಮಾರ್ಚ್ 29 ರಂದು ನಕಲಿ ನಕಲಿ ಕೀ ಬಳಸಿ ಉಮಾ ಅವರ ಮನೆಯಲ್ಲಿದ್ದ 6 ಲಕ್ಷ ಹಣ ಮತ್ತು 3.22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು, ಬಳಿಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವಸ್ಥಾನದ ಹುಂಡಿಗೆ ಹಣ ಹಾಕಿದ್ದಾರೆ. ಈ ಬಗ್ಗೆ ಕೆ.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಮೈಸೂರು, ಚಾಮರಾಜನಗರ ಗೆಲ್ಲಲು ಸಿಎಂ ಸಿದ್ದು ವಿಶ್ವಪ್ರಯತ್ನ – ಇಂದು ಮತ್ತೆ ಎರಡೂ ಕ್ಷೇತ್ರಗಳಿಗೆ ಭೇಟಿ..! –