ಬೆಂಗಳೂರು : ಫ್ಲೈ ಓವರ್ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 32 ವರ್ಷದ ನವೀನ್ ಎಂಬಾತ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದಿದ್ದು, ಫ್ಲೈ ಓವರ್ ಮೇಲೆಯೆ ತನ್ನ ಬೈಕ್ ಪಾರ್ಕಿಂಗ್ ಮಾಡಿ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನವೀನ್ KPTCLನಲ್ಲಿ ಕೆಲಸ ಮಾಡ್ತಿದ್ದ. ಎಲೆಕ್ಟ್ರಿಕ್ ಬೈಕ್ನಲ್ಲಿ ಮನೆಯಿಂದ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ನವೀನ್ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದ. ಎರಡು ತಿಂಗಳ ಹಿಂದೆ ಕವಿಕಾದಲ್ಲಿ ಕೆಲಸಕ್ಕೆ ಸೇರಿದ್ದ. ಕಾಂಟ್ರಾಕ್ಟ್ ಬೇಸ್ ಮೇಲೆ ಕೆಲಸಕ್ಕೆ ಸೇರಿದ್ದ ನವೀನ್. ಡ್ಯೂಟಿ ಮೇಲೆ ಹೋಗ್ತಿದ್ದೀನಿ ಎಂದು ಮನೆಯಲ್ಲಿ ಹೇಳಿ ಬಂದಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳೇನು ಎಂಬ ವಿಚಾರ ಇನ್ನಷ್ಟೇ ಹೊರಬಲಿದೆ. ಘಟನಾ ಸ್ಥಳದಲ್ಲಿ ಮೃತನ ತಂಗಿ ಸೇರಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ : ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ದು ಕುಮಾರಸ್ವಾಮಿ – ಚಲುವರಾಯಸ್ವಾಮಿ ಗಂಭೀರ ಆರೋಪ..!