ಬೆಂಗಳೂರು : ನಮ್ಮ ಮೆಟ್ರೋ ಟ್ರ್ಯಾಕ್ಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಿನ್ನೆ ಸಂಜೆ 5.41ರ ಸುಮಾರಿಗೆ 57 ವರ್ಷದ ನವೀನ್ ಕುಮಾರ್ ಅರೋರ ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸದ್ಯ 08:45 ಗಂಟೆಯಿಂದ ಎಂದಿನಂತೆ ಮೆಟ್ರೋ ಸಂಚಾರ ಪ್ರಾರಂಭವಾಗಿದೆ.
ಎರಡು ದಿನಗಳ ಹಿಂದೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಆಕಸ್ಮಿಕವಾಗಿ ಮೆಟ್ರೋ ಹಳಿ ಮೇಲೆ ಬಿದ್ದಿತ್ತು. ನಂತರ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ಎಎಚ್‌ಡಿ ಹಳಿಗಳ ತುರ್ತು ಟ್ರಿಪ್ ಸಿಸ್ಟಮ್ ವಿದ್ಯುತ್ ಲೈನ್ ಅನ್ನು ಸ್ವಿಚ್ ಆಫ್ ಮಾಡಿ ಮಗುವನ್ನು ರಕ್ಷಿಸಿದರು.
ಇದನ್ನೂ ಓದಿ : ಕೋಲಾರ : ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಬಚಾವ್..!
Post Views: 73