Download Our App

Follow us

Home » ಜಿಲ್ಲೆ » ಹೊಸಪೇಟೆ : ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸಾ*ವು..!

ಹೊಸಪೇಟೆ : ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸಾ*ವು..!

ಹೊಸಪೇಟೆ : ರಥದ ಚಕ್ರದಡಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಹೊರವಲಯದ ಶ್ರೀ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ಸಂಭವಿಸಿದೆ. ರಾಮು (45) ಮೃತ ದುರ್ದೈವಿ.

ರಥ ಬೀದಿಯಲ್ಲಿ ಬರುವಾಗ ರಾಮು ಬಾಳೆ ಹಣ್ಣಿನ ಮೇಲೆ ಕಾಲಿಟ್ಟು ಜಾರಿ ಬಿದ್ದು ರಥದ ಚಕ್ರದಡಿ ಸುಲಿಕಿದ್ದಾರೆ. ಕೂಡಲೇ ಅಲ್ಲಿದ್ದ ಭಕ್ತರ ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಅಷ್ಟರಲ್ಲಾಗಲೇ ತೀವ್ರ ರಕ್ತಸ್ರಾವದಿಂದ ಚೀರಾಡಿದ್ದಾರೆ. ರಥದ ಚಕ್ರದಲ್ಲಿ ಸಿಲುಕುತ್ತಿದ್ದಂತೆ ಆಂಬ್ಯುಲೆನ್ಸ್ ಮೂಲಕ ಗಾಯಾಳುವನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದುರಾದೃಷ್ಟವಶಾತ್ ಆಸ್ಪತ್ರೆಯಲ್ಲಿ ರಾಮು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಿರಣ್ ತೋಟಂಬೈಲ್ “ಧರ್ಮಭೀರು ನಾಡಪ್ರಭು ಕೆಂಪೇಗೌಡ” ಚಲನಚಿತ್ರಕ್ಕೆ ತಾತ್ಕಾಲಿಕ ತಡೆಯಾಜ್ಞೆ..!

Leave a Comment

RELATED LATEST NEWS

Top Headlines

ಮಹಾರಾಷ್ಟ್ರದಲ್ಲಿ IT ಅಧಿಕಾರಿಗಳ ಬೃಹತ್​ ರೇಡ್​ – 26 ಕೋಟಿ ನಗದು, 90 ಕೋಟಿ ಮೌಲ್ಯದ ಸಂಪತ್ತು ಜಪ್ತಿ..!

ಮಹಾರಾಷ್ಟ್ರ : ಆದಾಯ ತೆರಿಗೆ ಇಲಾಖೆ (IT) ನಿನ್ನೆ ರಾತ್ರಿ ನಾಸಿಕ್‌ನಲ್ಲಿರುವ ಪ್ರಸಿದ್ಧ ಆಭರಣ ಮಳಿಗೆಯ ಮೇಲೆ ದಾಳಿ ನಡೆಸಿ 26 ಕೋಟಿ ಹಣವನ್ನು ಜಪ್ತಿ ಮಾಡಿದೆ. ಅಕ್ರಮ

Live Cricket

Add Your Heading Text Here