Download Our App

Follow us

Home » ರಾಜಕೀಯ » ಇಂದು ಮಂಡ್ಯ, ಕೋಲಾರದಲ್ಲಿ ರಾಹುಲ್‌ ಗಾಂಧಿ ರಣಕಹಳೆ : ಸಿದ್ದು, ಡಿಕೆಶಿ ಸಾಥ್..!

ಇಂದು ಮಂಡ್ಯ, ಕೋಲಾರದಲ್ಲಿ ರಾಹುಲ್‌ ಗಾಂಧಿ ರಣಕಹಳೆ : ಸಿದ್ದು, ಡಿಕೆಶಿ ಸಾಥ್..!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ ಬರಲಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಮಂಡ್ಯ ನಗರಕ್ಕೆ ಆಗಮಿಸಲಿರುವ ರಾಹುಲ್‌ಗಾಂಧಿ ಅವರು 2 ಗಂಟೆಗೆ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ‘ಪ್ರಜಾಧ್ವನಿ-2’ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿ ಹಲವು ರಾಜ್ಯ ನಾಯಕರು ಸಾಥ್ ಅವರಿಗೆ ನೀಡಲಿದ್ದಾರೆ. ಈ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಕಾಂಗ್ರೆಸ್ ಶಕ್ತಿ ಪ್ರದರ್ಶಿಸಲಿದೆ.

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ರಾಜ್ಯದ ಮಟ್ಟಿಗೆ ತೀವ್ರ ಹಣಾಹಣಿ ಏರ್ಪಟ್ಟಿರುವ ಮಂಡ್ಯ ಕ್ಷೇತ್ರದಲ್ಲೇ ರಾಹುಲ್‌ಗಾಂಧಿ ಅವರು ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸುತ್ತಿದ್ದಾರೆ. ಬಳಿಕ ಮಂಡ್ಯದಿಂದ ನೇರವಾಗಿ ರಾಹುಲ್ ಗಾಂಧಿ ಕೋಲಾರಕ್ಕೆ ಎಂಟ್ರಿ ಕೊಡಲಿದ್ದಾರೆ.

ಕೋಲಾರದಲ್ಲಿ ಮಧ್ಯಾಹ್ನ 3 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದು, ಕೋಲಾರ-ಬೆಂಗಳೂರು ರಸ್ತೆಯ ಚೊಕ್ಕಂಡಹಳ್ಳಿಯಲ್ಲಿ ಸಮಾವೇಶ ನಡೆಯಲಿದೆ. ಕೋಲಾರ ಕ್ಷೇತ್ರದ ಅಭ್ಯರ್ಥಿ ಕೆ.ವಿ.ಗೌತಮ್ ಪರ ರಾಹುಲ್ ಪ್ರಚಾರ ನಡೆಸಲಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದ ರಕ್ಷಾ ರಾಮಯ್ಯ ಪರವೂ ಮತಯಾಚನೆ ಮಾಡಲಿದ್ದಾರೆ. ಕೋಲಾರ ಸಮಾವೇಶದಲ್ಲೂ ರಾಹುಲ್​ಗೆ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸಾಥ್ ನೀಡಲಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದ ಸಚಿವರು, ಶಾಸಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : ಇಂದು ದ್ವಾರಕೀಶ್​​ ಅಂತ್ಯಕ್ರಿಯೆ – ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here