Download Our App

Follow us

Home » ಅಪರಾಧ » ಮಂಡ್ಯ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣವನ್ನು ವಶಕ್ಕೆ ಪಡೆದ ಅಧಿಕಾರಿಗಳು..!

ಮಂಡ್ಯ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣವನ್ನು ವಶಕ್ಕೆ ಪಡೆದ ಅಧಿಕಾರಿಗಳು..!

ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಯಷ್ಟು ಹಣವನ್ನು ಚುನಾವಣಾ ಸಿಬ್ಬಂದಿ ಮತ್ತು ಮದ್ದೂರು ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕಡೆಗೆ ಸಾಗುತ್ತಿದ್ದಂತಹ ಕ್ರೇಟಾ ಕಾರೊಂದನ್ನು ತಡೆದ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ನಡೆಸಿದ ವೇಳೆಯಲ್ಲಿ ಅಂದಾಜು ಒಂದು ಕೋಟಿ ರೂಪಾಯಿ ಪತ್ತೆಯಾಗಿದೆ.

ಗಿರೀಶ್ ಎಂಬವರು ಬೆಂಗಳೂರಿನಿಂದ ಹ್ಯೂಂಡಾಯ್ ಕ್ರೇಟಾ ಕೆಎ – 54 – ಎಂ – 4030 ಕಾರಿನಲ್ಲಿ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಮದ್ದೂರು ತಾಲೂಕಿನ ಗಡಿಭಾಗ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಆರ್.ಪ್ರಸಾದ್ ಹಾಗೂ ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೋಲೀಸ್ ಸಿಬ್ಬಂದಿ ಕಾರನ್ನು ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಹಣ ಪತ್ತೆಯಾಗಿದೆ.

ಈ ಬಗ್ಗೆ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದ್ದಾರೆ. ದೊರೆತ ಹಣಕ್ಕೆ ಸೂಕ್ತ ಉತ್ತರ, ದಾಖಲೆ ನೀಡದ ಪರಿಣಾಮ ಹಣವನ್ನು ಸೀಝ್ ಮಾಡಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಸರತ್ತು – ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ದೆಹಲಿಗೆ ಪ್ರಯಾಣ..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here