Download Our App

Follow us

Home » ರಾಜಕೀಯ » ಮಂಡ್ಯ ರಾಜಕಾರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ​- ಪ್ರಧಾನಿ ಮೋದಿ ಭೇಟಿಯಾಗಿ ಟಿಕೆಟ್ ಗೆ ಬೇಡಿಕೆಯಿಟ್ಟ ಸುಮಲತಾ ಅಂಬರೀಷ್..!

ಮಂಡ್ಯ ರಾಜಕಾರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ​- ಪ್ರಧಾನಿ ಮೋದಿ ಭೇಟಿಯಾಗಿ ಟಿಕೆಟ್ ಗೆ ಬೇಡಿಕೆಯಿಟ್ಟ ಸುಮಲತಾ ಅಂಬರೀಷ್..!

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಸಾಕಷ್ಟಿದೆ. ಈಗಾಗಲೇ ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿರುವ ಸಂಸದೆ ಸುಮಲತಾ ಅಂಬರೀಷ್ ಈ ಬಾರಿ ಕೂಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಆದರೆ ಮಂಡ್ಯ ಕ್ಷೇತ್ರದ ಟಿಕೆಟ್ ತನಗೆ ಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ. ಈಗಾಗಲೇ ಬಿಜೆಪಿ ಮಂಡ್ಯ ಕ್ಷೇತ್ರದ ಸ್ಪರ್ಧೆಯನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಹಾಗಾಗಿ ಸುಮಲತಾ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂಬ ವದಂತಿ ಹಬ್ಬಿದೆ. ಇನ್ನು ಕೆಲವೇ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಲೋಕಸಭೆ ಚುನಾವಣೆ ಸ್ಪರ್ಧಿಗಳ ಪಟ್ಟಿ ಕೂಡ ಹೊರಬೀಳುವ ಸಾಧ್ಯತೆಗಳಿವೆ.

ಈ ಹಿನ್ನೆಲೆ ಸುಮಲತಾ ಅವರು ನಿನ್ನೆಯಷ್ಟೇ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಮಾಡಿದ್ದರು. ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್​ಜೀ ಜತೆ ಚರ್ಚೆ ನಡೆಸಿದ್ದರು. ಇಂದು ಖುದ್ದು ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ತನಗೇ ಸೀಟ್​ ಉಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ಟಿಕೆಟ್​ ನೀಡುವಂತೆ ಬಿಜೆಪಿ ಹೈಕಮಾಂಡ್​ ಮೇಲೆ ಒತ್ತಡ ಹೇರಿದ್ದಾರೆ.
ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ತಾವು ಸಂಸದೆಯಾಗಿ ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳು, ತಮಗೆ ಯಾವ ರೀತಿ ಕ್ಷೇತ್ರದ ಜನರ ಬೆಂಬಲವಿದೆ, ಮಂಡ್ಯ ಜಿಲ್ಲೆಯ ರಾಜಕೀಯ ಚಿತ್ರಣ ಹೇಗಿದೆ ಎಂಬ ಬಗ್ಗೆ ವರಿಷ್ಠರಿಗೆ ಮನದಟ್ಟು ಮಾಡಿ ಟಿಕೆಟ್ ಗಿಟ್ಟಿಸಿಕೊಳ್ಳಲು ಮುಂದಾಗಿದ್ದಾರೆ.

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here