Download Our App

Follow us

Home » ಅಪರಾಧ » ಮಂಗಳೂರು : ಕಾಲೇಜು ಆವರಣದಲ್ಲಿಯೇ ಮುಸುಕುಧಾರಿ ಯುವಕರಿಂದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ..!

ಮಂಗಳೂರು : ಕಾಲೇಜು ಆವರಣದಲ್ಲಿಯೇ ಮುಸುಕುಧಾರಿ ಯುವಕರಿಂದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಕಿರಾತಕರಿಬ್ಬರು ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಹಾಕಿದ್ದಾರೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆರೋಪಿ ಯುವಕರು ಮುಸುಕಧಾರಿಯಾಗಿದ್ದು, ತಕ್ಷಣ ಎಚ್ಚೆತ್ತ ಕಾಲೇಜು ವಿದ್ಯಾರ್ಥಿಗಳು ಇಬರಲ್ಲಿ ಓರ್ವನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ವ್ಯಕ್ತಿಯ ಹೆಸರು ಅಬೀನ್​ ಅನ್ನೋ ಮಾಹಿತಿ ಲಭ್ಯವಾಗಿದೆ.

ಮಾಹಿತಿ ಪ್ರಕಾರ ಆರೋಪಿಗಳು ಕೇರಳದಿಂದ ಬಂದು ಆ್ಯಸಿಡ್​ ಎರಚಿದ್ದು, ದ್ವಿತೀಯ ಪಿಯು ವಿದ್ಯಾರ್ಥಿನಿಯರು ಕಾಲೇಜಿನ ಕಾರಿಡಾರ್​ ನಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ಬಂದು ಆ್ಯಸಿಡ್​ ದಾಳಿ ನಡೆಸಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಪಾಕ್​ ಪರ​ ಘೋಷಣೆ ಕೇಸ್ : FSL ವರದಿ ನಿಮ್ಮ ಸುಳ್ಳನ್ನು ಬಹಿರಂಗಪಡಿಸಿದೆ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here